ದಾವಣಗೆರೆ: ‘1.05 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶ ಇರುವ ಭದ್ರಾ ಜಲಾಶಯವನ್ನು ಕರ್ನಾಟಕ ನೀರಾವರಿ ನಿಗಮದಿಂದ ಬೇರ್ಪಡಿಸಿ, 2.25 ಲಕ್ಷ ಹೆಕ್ಟೇರ್ ಹನಿ ನೀರಾವರಿ ಅಚ್ಚುಕಟ್ಟು ಪ್ರದೇಶ ಹೊಂದಿರುವ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರಿಸಲು ತೀರ್ಮಾನಿಸಿರುವ ನಿರ್ಧಾರದಿಂದ ಹಿಂದೆ ಸರ್ಕಾರ ಹಿಂದೆ ಸರಿಯಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದ ನಿಯೋಗ ಮನವಿ ಮಾಡಿದೆ.

ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ರೈತ ಮುಖಂಡರ ನಿಯೋಗ, ‘ಸರ್ಕಾರದ ನಿರ್ಧಾರದಿಂದ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಹಕ್ಕನ್ನು ಕಸಿದುಕೊಂಡಂತಾಗಲಿದೆ. ಕರ್ನಾಟಕ ನೀರಾವರಿ ನಿಗಮವನ್ನು ಯಾವುದೇ ಕಾರಣಕ್ಕೂ ಬೇರ್ಪಡಿಸಬಾರದು’ ಎಂದು ಮನವಿ ಮಾಡಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಈ ವಿಚಾರದಲ್ಲಿ ರೈತರ ಹಿತ ಕಾಯಬೇಕು. ಸಿಎಂ, ಡಿಸಿಎಂ ಅವರೊಂದಿಗೆ ಚರ್ಚಿಸಿ ಯಥಾಸ್ಥಿತಿ ಮುಂದುವರಿಸುವಂತೆ ಒತ್ತಡ ಹೇರಬೇಕು’ ಎಂದು ಭಾರತೀಯ ರೈತ ಒಕ್ಕೂಟದ ಅಧ್ಯಕ್ಷ ಎಚ್.ಆರ್. ಲಿಂಗರಾಜ್ ಶಾಮನೂರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.