ಸೋಮವಾರ, ಆಗಸ್ಟ್ 8, 2022
23 °C

ಯೋಗಿ ಆದಿತ್ಯನಾಥ್‌ ಭೇಟಿ ಮಾಡಿದ ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರ ಜೊತೆ ಲಕ್ನೊಗೆ ಭೇಟಿ ನೀಡಿ ಉತ್ತರ ಪ್ರದೇಶದ  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದರು.

’ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಹೊನ್ನಾಳಿಯಲ್ಲಿ ನನ್ನ ಪರ ಪ್ರಚಾರ  ನೆಡೆಸಿ, ಗೆಲುವಿಗೆ ಕಾರಣರಾಗಿದ್ದರು. ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಪುಣ್ಯಸ್ಮರಣೆ ಪ್ರಯುಕ್ತ  ಮಾರ್ಚ್ ತಿಂಗಳಲ್ಲಿ ರಾಜ್ಯಮಟ್ಟದ ಕೃಷಿಮೇಳ ಹಮ್ಮಿಕೊಂಡ ಸಂದರ್ಭ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೆ. ಕಾರಣಾಂತರದಿಂದ ಬರಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಯಿತು’ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥ್ ಅವರು ಕೋವಿಡ್‌–19 ಸೇರಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಅವರ ಮುಖದಲ್ಲಿರುವ ತೇಜಸ್ಸು ದೈವಕಳೆ ನನ್ನನ್ನು ಆಕರ್ಷಿಸಿತು. ಅವರ ಜೊತೆ ಕಳೆದ ಸಮಯ ಅತ್ಯಮೂಲ್ಯ ನನ್ನ ಜೀವನದಲ್ಲಿ ಎಂದೂ ಮರೆಯಲು ಸಾಧ್ಯವಿಲ್ಲ, ಇದು ನನ್ನ ಸೌಭಾಗ್ಯವೇ ಸರಿ’ ಎಂದು ತಿಳಿಸಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು