ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂತ್ರಿಯಾಗಲು ನಮಗೆ ಅರ್ಹತೆ ಇಲ್ಲವೇ: ರೇಣುಕಾಚಾರ್ಯ ಪ್ರಶ್ನೆ

Last Updated 24 ಜನವರಿ 2022, 19:35 IST
ಅಕ್ಷರ ಗಾತ್ರ

ಹೊನ್ನಾಳಿ: ‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮಂತ್ರಿಗಳಾದವರೇ ಮತ್ತೆ ಮಂತ್ರಿಗಳಾಗಬೇಕೆ? ನಮಗೆ ಆ ಅರ್ಹತೆ ಇಲ್ಲವೇ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.

‘ರಾಜ್ಯದಲ್ಲಿನ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಲು ನಾನು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೆ ಮಾತ್ರ ಗೊತ್ತು’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ನಮ್ಮ ಕ್ಷೇತ್ರದ ಸಮಸ್ಯೆಗಳು ಹಾಗೂ ಆಗಬೇಕಾದ ಕೆಲಸಗಳ ಬಗ್ಗೆ ಹೇಳಲು ಕರೆ ಮಾಡಿದರೆ ಕೆಲ ಸಚಿವರು ಫೋನ್‌ ಕೂಡ ತೆಗೆಯುವುದಿಲ್ಲ. ಸಚಿವರು ಉತ್ತರ ಕೊಡುವ ಬದಲು, ಅವರ ಆಪ್ತ ಸಹಾಯಕರು ಷರಾ ಬರೆಯುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಹಲವು ಬಾರಿ ಸಚಿವರಾದವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೊಸಬರಿಗೆ ಅವಕಾಶ ನೀಡಬೇಕು. ಮಾರ್ಚ್‌ ಬದಲು ಈಗಲೇ ಸಚಿವ ಸಂಪುಟ ವಿಸ್ತರಣೆ ಮಾಡಬೇಕು. ಅಗತ್ಯ ಬಿದ್ದರೆ ನಾವು ದೆಹಲಿಗೂ ಹೋಗುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

‘ಹೊಸಬರಿಗೆ ಸಚಿವ ಸ್ಥಾನ ಸಿಗಬೇಕು ಎಂದು ನಾನು ಹಾಗೂ ಯತ್ನಾಳ್ ಒಂದಾಗಿದ್ದೇವೆ. ಇದು ಪಕ್ಷದ ವಿರುದ್ಧ ಬಂಡಾಯವಲ್ಲ’ ಎಂದು ಸ್ಪಷ್ಟನೆ ನೀಡಿದರು.

‘ಬಿ.ವೈ. ವಿಜಯೇಂದ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಅವರದ್ದೇ ಆದ ವರ್ಚಸ್ಸು ಇದೆ. ಅವರಿಗೆ ಸಚಿವ ಸ್ಥಾನ ಕೊಡುವುದು–ಬಿಡುವುದು ವರಿಷ್ಠರಿಗೆ ಬಿಟ್ಟ ವಿಚಾರ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT