ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಮಿ ಒತ್ತುವರಿ ಮಾಡಿಕೊಂಡಿರುವ ವಾಟಾಳ್‌: ರೇಣುಕಾಚಾರ್ಯ

Last Updated 24 ನವೆಂಬರ್ 2020, 16:47 IST
ಅಕ್ಷರ ಗಾತ್ರ

ದಾವಣಗೆರೆ: ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದ ಆಯರಹಳ್ಳಿ ಗ್ರಾಮದ ಸರ್ವೆ ನಂಬರ್ 96,97,98,99 ರಲ್ಲಿ ಬರುವ ಪರಿಶಿಷ್ಟ ಜಾತಿ-ಪರಿಶಿಷ್ಟಪಂಗಡ, ಹಿಂದುಳಿದ ವರ್ಗಕ್ಕೆ ಸೇರಿದ 73 ಎಕರೆ ಜಮೀನನ್ನು ವಾಟಾಳ್‌ ನಾಗರಾಜ್‌ ಒತ್ತುವರಿ ಮಾಡಿಕೊಂಡಿದ್ದಾರೆ. ಅದನ್ನು ಮಾಡಿ ಮಗಳು–ಅಳಿಯನ ಹೆಸರಿನಲ್ಲಿ ನೋಂದಣಿ ಮಾಡಿಸಿದ್ದಾರೆ. ತೋಟ ಕಾಯಲು ತಮಿಳುನಾಡಿನವರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.

ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಇದಕ್ಕೆ ಸಂಬಂಧಿಸಿದ ದಾಖಲೆಗಳು ನನ್ನಲ್ಲಿವೆ. ಅಲ್ಲದೇ ಎಲ್ಲೆಲ್ಲಿ ಸೈಟ್‌ ಮಾಡಿಕೊಂಡಿದ್ದಾರೆ ಎಂಬ ದಾಖಲೆ ನೀಡಬೇಕಾ’ ಎಂದು ಪ್ರಶ್ನಿಸಿದ ಅವರು, ‘ಮುಖ್ಯಮಂತ್ರಿಗಳ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು’ ಎಂದು ಆಗ್ರಹಿಸಿದರು.

ಐದನೇ ತಾರೀಕಿನಂದು ಕರೆ ನೀಡಿರುವ ಕರ್ನಾಟಕ ಬಂದ್ ಯಶಸ್ವಿಯಾಗಲು ನಾವು ಬಿಡುವುದಿಲ್ಲ. ಬಂದ್ ನೆಪದಲ್ಲಿ ಕಾನೂನು ಉಲ್ಲಂಘನೆ ಮಾಡಿದರೆ ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಮುಖ್ಯಮಂತ್ರಿ ಹುದ್ದೆ ಅಂದರೆ ಬಸ್ಸಲ್ಲಿ ಸೀಟಿಗೆ ಟವಲ್ ಹಾಕಿದಂತೆ ಅಲ್ಲ. ರಾಷ್ಟ್ರೀಯ ಅಧ್ಯಕ್ಷರು, ಶಾಸಕರೇ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿರುವುದು. ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡಿ ಡೆಡ್ ಲೈನ್ ಕೊಡುವುದನ್ನು ಬಿಡಬೇಕು ಎಂದು ಎಚ್ಚರಿಸಿದರು.

ಯಡಿಯೂರಪ್ಪ 21ನೇ ಶತಮಾನದ ಆಧುನಿಕ ಬಸವಣ್ಣ ಎಂದು ಬಣ್ಣಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT