ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾಳಿ: ಧನಂಜಯ ಸರ್ಜಿ ಪರ ರೇಣುಕಾಚಾರ್ಯ ಮತಯಾಚನೆ 

Published 29 ಮೇ 2024, 6:50 IST
Last Updated 29 ಮೇ 2024, 6:50 IST
ಅಕ್ಷರ ಗಾತ್ರ

ಹೊನ್ನಾಳಿ: ನೈರುತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ವೈದ್ಯ ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಮೈತ್ರಿ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದರು.

ಮಂಗಳವಾರ ಪಟ್ಟಣದ ವಕೀಲರ ವೃಂದ, ಎಲ್‍ಐಸಿ ಕಚೇರಿ, ಬ್ಯಾಂಕ್‍ಗಳು ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿ ಮಾತನಾಡಿದ ಅವರು, ‘ಚಿಂತಕರ ಚಾವಡಿ ಎಂದೇ ಕರೆಯುವ ವಿಧಾನ ಪರಿಷತ್‍ಗೆ ವಿದ್ಯಾವಂತರು, ಶಿಕ್ಷಣ ತಜ್ಞರನ್ನು ಆರಿಸಿ ಕಳಿಸುವ ಜವಾಬ್ದಾರಿ ಪದವೀಧರರ ಮೇಲಿದೆ ಎಂದರು.

ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಕೊಡಗು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ ಮತ್ತು ನ್ಯಾಮತಿ ತಾಲ್ಲೂಕುಗಳ ಪದವೀಧರರು ಹಾಗೂ ಶಿಕ್ಷಕರನ್ನು ಒಳಗೊಂಡಿದೆ. ಜೂ.3 ರಂದು ನಡೆಯುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಜೆ.ಕೆ.ಸುರೇಶ್, ಮುಖಂಡರಾದ ಕೆ.ಪಿ.ಕುಬೇಂದ್ರಪ್ಪ, ರಂಗನಾಥ್, ಮಂಜುನಾಥ ಇಂಚರ, ಮಹೇಶ್ ಹುಡೇದ್ ಇತರರು ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT