ಗುರುವಾರ , ಆಗಸ್ಟ್ 5, 2021
28 °C
ಶಾಸಕ ಎಂ.ಪಿ. ರೇಣುಕಾಚಾರ್ಯ ಮಾಹಿತಿ

ಎಲ್ಲ ಕಾಯಿಲೆಗಳಿಗೆ ಚಿಕಿತ್ಸೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊನ್ನಾಳಿ: ಅವಳಿ ತಾಲ್ಲೂಕಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಮೀಸಲಿಟ್ಟ ಹಾಸಿಗೆಯ ಶೇ 75ರಷ್ಟನ್ನು ಕೊರೊನೇತರ ರೋಗಿಗಳಿಗೆ ಮೀಸಲಿಡಲಾಗುವುದು ಎಂದು ಶಾಸಕ  ಎಂ.ಪಿ. ರೇಣುಕಾಚಾರ್ಯ ಅವರು ಹೇಳಿದರು.

ತಾಲ್ಲೂಕಿನ ಸುಂಕದಕಟ್ಟೆ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲಸಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ 60 ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗಾಗಿಯೇ ಮೀಸಲಿಡಲಾಗಿತ್ತು. ಇದೀಗ ಸೋಂಕಿನ ಪ್ರಮಾಣ ಕಡಿಮೆಯಾದ ಕಾರಣ 13 ಹಾಸಿಗೆಗಳನ್ನು ಮಾತ್ರ ಕೋವಿಡ್‍ ರೋಗಿಗಳಿಗಾಗಿ ಮೀಸಲಿಡಲಾಗುವುದು. ಸೋಮವಾರ
ದಿಂದ ಎಲ್ಲಾ ಕಾಯಿಲೆಗಳಿಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭವಾಗಲಿದೆ ಎಂದು ಹೇಳಿದರು.

ತಾಲ್ಲೂಕಿನ ತರಗನಹಳ್ಳಿ, ಸೋಮನಮಲ್ಲಾಪುರ, ಎಚ್. ಗೋಪಗೊಂಡನಹಳ್ಳಿ ಹಾಗೂ ಹೊನ್ನಾಳಿಯಲ್ಲಿರುವ ಅಂಬೇಡ್ಕರ್ ಭವನ ಮತ್ತು ಹಳದಮ್ಮ ದೇವಿ ಪ್ರೌಢಶಾಲೆಯ ಲಸಿಕಾ ಕೇಂದ್ರಗಳಿಗೂ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು