ಜಗಳೂರು: ಪಟ್ಟಣದಲ್ಲಿ ಮಂಗಳವಾರ ರಾತ್ರಿ ಎಗ್ ರೈಸ್ ವ್ಯಾಪಾರಿಯೊಬ್ಬರನ್ನು ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ.

ಬಸವರಾಜ್ (40) ಕೊಲೆಯಾದ ವ್ಯಕ್ತಿ. ಪಟ್ಟಣದ ಹೊರವಲಯದ ಬಿದರಕೆರೆ ರಸ್ತೆಯಲ್ಲಿ ಅಶ್ವತ್ಥ್ ರೆಡ್ಡಿ ನಗರ ಸಮೀಪಬಿದರಕೆರೆ ರಸ್ತೆಬದಿಯಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ವ್ಯಾಪಾರ ಮುಗಿಸಿ ಮನೆಗೆ ಹೋಗಿದ್ದ ನಂತರ ಕೊಲೆ ನಡೆದಿರಬಹುದು ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯಾದ ಬಸವರಾಜ್ ಸಂಬಂಧಿಅಜ್ಜಯ್ಯ ಎಂಬುವರು ವಿಷ ಸೇವನೆ ಮಾಡಿದ್ದು, ಅನುಮಾನ ಮೂಡಿಸಿದೆ.‘ಮಹಿಳೆಯ ಅನೈತಿಕ ಸಂಬಂಧ ಇರುವ ಶಂಕೆಯಿದ್ದು, ಈ ಸಂಬಂಧ ಸಿಪಿಐ ದುರ್ಗಪ್ಪ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು ತನಿಖೆ ನಡೆಯುತ್ತಿದೆ, ಶೀಘ್ರದಲ್ಲಿ ಆರೋಪಿಯನ್ನು ಬಂಧಿಸುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.