ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕನ್‌ ಮಾಡಿಲ್ಲವೆಂದು ಹೆಂಡತಿಯ ಕೊಲೆ; 6 ವರ್ಷ ಜೈಲು

Published 6 ಡಿಸೆಂಬರ್ 2023, 6:52 IST
Last Updated 6 ಡಿಸೆಂಬರ್ 2023, 6:52 IST
ಅಕ್ಷರ ಗಾತ್ರ

ದಾವಣಗೆರೆ: ಹೆಂಡತಿಯನ್ನು ಕೊಲೆ ಮಾಡಿದ್ದ ಅಪರಾಧಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 6 ವರ್ಷ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ.

ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದ ಮಾಗನಹಳ್ಳಿ ಕೆಂಚಪ್ಪ ಶಿಕ್ಷೆಗೊಳಗಾದ ಅಪರಾಧಿ.

2022ರ ಜೂನ್‌ 8ರಂದು ಮದ್ಯಪಾನ ಮಾಡಿದ್ದ ಕೆಂಚಪ್ಪ ಚಿಕನ್ ಮಾಡಿಲ್ಲ ಎಂಬ ಕಾರಣಕ್ಕೆ ಪತ್ನಿ ಶೀಲಾ ಅವರೊಂದಿಗೆ ಜಗಳವಾಡಿ ಚಾಕುವಿನಿಂದ ಎಡಭುಜಕ್ಕೆ ಚುಚ್ಚಿ ಕೊಲೆ ಮಾಡಿದ್ದ. ಶೀಲಾ ಅವರ ತಾಯಿ ಉಕ್ಕಡಗಾತ್ರಿ ಗುತ್ಯಮ್ಮ ಅವರು ಈ ಬಗ್ಗೆ ಹರಿಹರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ತನಿಖಾಧಿಕಾರಿ ಸಿಪಿಐ ಸತೀಶ ಯು. ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವಾದ – ಪ್ರತಿವಾದ ಆಲಿಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ವಿ.ವಿಜಯಾನಂದ ಅವರು ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರ ವಕೀಲ ಸತೀಶ ಕುಮಾರ್ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT