ದಾವಣಗೆರೆ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ನಮ್ಮ ಸಿಬ್ಬಂದಿ ಹಿಡಿದಿದ್ದಾರೆ. ಅವರಿಗೆ ಶಿಕ್ಷೆ ವಿಧಿಸುವುದು ನಮ್ಮ ಮುಂದಿರುವ ಸವಾಲು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, 'ನ್ಯಾಯಾಲಯದಲ್ಲಿ ಸರಿಯಾದ ನಿರ್ವಹಣೆ ನೀಡುವ ಕುರಿತು ಪೊಲೀಸರ ಜತೆ ಚರ್ಚೆ ಮಾಡ್ತೀನಿ, ರಾಜ್ಯದಲ್ಲಿ ಅತ್ಯಾಚಾರ ಪ್ರಕರಣ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುತ್ತೇವೆ. ಅತ್ಯಾಚಾರ ಹಾಗೂ ಮಾದಕ ವಸ್ತುಗಳ ಪ್ರಕರಣದಲ್ಲಿ ಬಿಗಿ ಕ್ರಮ ತೆಗೆದುಕೊಳ್ಳ ಬೇಕಾಗಿದೆ' ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.