ಸೋಮವಾರ, ಸೆಪ್ಟೆಂಬರ್ 27, 2021
26 °C
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌

ಪರಿಸರ ಸಮತೋಲನ ಕಾಪಾಡಲು ಬೀಜದುಂಡೆ ಬಿತ್ತನೆ: ನಳಿನ್‌ ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಗಿರಿ: ಇತ್ತೀಚಿನ ದಿನಗಳಲ್ಲಿ ಮಾನವನ ದುರಾಸೆಯಿಂದಾಗಿ ಕಾಡು ನಾಶವಾಗುತ್ತಿದೆ. ಕಾಡು ನಾಶವಾಗುತ್ತಿರುವುದರಿಂದ ಮರಗಿಡಗಳು ಕಡಿಮೆಯಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗಿ ಪ್ರಕೃತಿ ವಿಕೋಪಕ್ಕೆ ಕಾರಣವಾಗಿದೆ. ಪರಿಸರ ಸಮತೋಲನ ಕಾಪಾಡಲು ಅರಣ್ಯ ಪ್ರದೇಶಗಳಲ್ಲಿ ಬಿಜೆಪಿಯಿಂದ ಬೀಜದುಂಡೆ ಬಿತ್ತನೆ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು.

ಪಟ್ಟಣದ ಜವಳಿ ಸಮುದಾಯ ಭವನದಲ್ಲಿ ಶನಿವಾರ ತಾಲ್ಲೂಕು ಬಿಜೆಪಿಯಿಂದ ನಡೆದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿದ್ಧರಾಮಯ್ಯ ಅವರು ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಯಡಿಯೂರಪ್ಪ ಅವರ ಅವಧಿಯಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂಬುದಕ್ಕೆ ಅಂಕಿಅಂಶಗಳು ಹೇಳುತ್ತವೆ. ಈ ದೇಶದಲ್ಲಿ ಅತಿ ಹೆಚ್ಚು ಕಾಲ ಆಡಳಿತ ನಡೆಸಿದ್ದು ಕಾಂಗ್ರೆಸ್. ಅಂತಹ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅವಮಾನಿಸಿತ್ತು. ಬಾಬೂ ಜಗಜೀವನರಾಂ ಅವರನ್ನು ಪ್ರಧಾನಮಂತ್ರಿ ಮಾಡಲು ಮುಂದಾಗಲಿಲ್ಲ ಎಂದು ವ್ಯಂಗ್ಯವಾಡಿದರು.

ಸಂಸದ ಜಿ.ಎಂ. ಸಿದ್ದೇಶ್ವರ, ಕೆಎಸ್‌ಡಿಎಲ್ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗನವಾಡಿ. ತಾಲ್ಲೂಕು ಬಿಜೆಪಿ ಅಧ್ಯಕ್ಷ ಶ್ರೀನಿವಾಸ್, ಮಲ್ಲಿಕಾರ್ಜುನ್, ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಿ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.