ಚನ್ನಗಿರಿ: ತಾಲ್ಲೂಕಿನ ನಲ್ಲೂರು ಗ್ರಾಮದ ಮೂಲಕ ಹಾದುಹೋಗಿರುವ ಮಲ್ಪೆ-ಮೊಳಕಾಲ್ಮುರು ರಾಜ್ಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಹಿಂಬದಿ ಸವಾರರಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಹೂಗಿನಕಟ್ಟೆ ಗ್ರಾಮದ ಪ್ರೇಮಾ (23) ಮೃತರು.

ಇವರು ಸೋದರ ಸಂಬಂಧಿ ಮನೋಜ್ ಎಂಬವರ ಜತೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಇನ್ನೊಂದು ಬೈಕ್ ಡಿಕ್ಕಿ ಹೊಡೆದಿದೆ. ರಭಸಕ್ಕೆ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಪ್ರೇಮಾ ಕೆಳಗೆ ಬಿದ್ದು ತೀವ್ರ ರಕ್ತಸಾವ್ರದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಎರಡೂ ಬೈಕ್ಗಳ ಸವಾರರಿಗೆ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-43-1349324940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.