ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗಳು ಗ್ರಾಮೀಣ ಪ್ರದೇಶದ ಕಾಮಧೇನು: ರುದ್ರಮ್ಮ

ಮುದಿಗೆರೆ ಗ್ರಾಮದಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮ
Published 21 ಸೆಪ್ಟೆಂಬರ್ 2023, 13:20 IST
Last Updated 21 ಸೆಪ್ಟೆಂಬರ್ 2023, 13:20 IST
ಅಕ್ಷರ ಗಾತ್ರ

ಮುದಿಗೆರೆ(ಚನ್ನಗಿರಿ): ‘ಕೆರೆಗಳು ನಮ್ಮ ದಿನ ನಿತ್ಯದ ಬೇಕು ಬೇಡಗಳನ್ನು ಪೂರೈಸುತ್ತಾ ಬಂದಿರುವ ಕಾಮಧೇನುಗಳಾಗಿವೆ. ಅವುಗಳನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುದ್ರಮ್ಮ ತಿಳಿಸಿದರು.

ತಾಲ್ಲೂಕು ಮುದಿಗೆರೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಘದಿಂದ ಗುರುವಾರ ನಡೆದ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮಗಳ ಅಭಿವೃದ್ಧಿಯಲ್ಲಿ ಕೆರೆಗಳ ಪಾತ್ರ ಬಹು ಮುಖ್ಯವಾಗಿರುತ್ತದೆ. ಇಂದಿಗೂ ರಾಜ್ಯದಲ್ಲಿ ಶೇ 60ರಷ್ಟು ಜನರು ಕೆರೆಯ ನೀರನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಕೆರೆಗಳು ತುಂಬಿದರೆ ಕೊಳವೆಬಾವಿಗಳ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ. ಈ ಬಾರಿ ಮಳೆ ಕೊರತೆಯಿಂದ ಕೆರೆಗಳಲ್ಲಿ ನೀರಿನ ಸಂಗ್ರಹ ತುಂಬಾ ಕಡಿಮೆಯಾಗಿದೆ. ಕೆರೆಗಳು ಮಲಿನಗೊಳ್ಳದಂತೆ ಹಾಗೂ ಕೆರೆಯ ನೀರನ್ನು ಪೋಲು ಮಾಡದಂತೆ ಎಚ್ಚರಿಕೆಯಿಂದ ಉಪಯೋಗಿಸಿಕೊಳ್ಳಬೇಕಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದವರು ಗ್ರಾಮೀಣ ಪ್ರದೇಶಗಳ ಕೆರೆಗಳ ಜೀರ್ಣೋದ್ಧಾರಕ್ಕಾಗಿ ಶ್ರಮಿಸುತ್ತಿದ್ದಾರೆ’ ಎಂದರು.

ತಾಲ್ಲೂಕು ಯೋಜನಾಧಿಕಾರಿ ಶ್ರೀಧರ ಗೊಂಡ, ಮೇಲ್ವಿಚಾರಕ ರವಿಕುಮಾರ್, ಕೃಷಿ ಅಧಿಕಾರಿ ಕೆ.ಹನುಮಂತಪ್ಪ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿ.ಎಚ್.ಪ್ರಭಾಕರ್, ಪಿಡಿಒ ಕೆ.ಪಿ.ಎಂ. ಗಿರೀಶ್, ರುದ್ರಪ್ಪ, ಸಿದ್ದಪ್ಪ, ಎಂಜಿನಿಯರ್ ಹರೀಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT