ಪೌರಾಡಳಿತ, ತೋಟಗಾರಿಕೆ ಸಚಿವ ನಾರಾಯಣ ಗೌಡ
ಡ್ರಗ್ಸ್ ಮಾಫಿಯಾದಲ್ಲಿ ರಾಜಕಾರಣಿ ಮಕ್ಕಳಿದ್ದರೂ ತನಿಖೆ :ಸಚಿವ ನಾರಾಯಣ ಗೌಡ

ದಾವಣಗೆರೆ: ‘ಡ್ರಗ್ಸ್ ಮಾಫಿಯಾದಲ್ಲಿ ರಾಜಕಾರಣಿಗಳ ಮಕ್ಕಳ ಹೆಸರು ಕೇಳಿಬರುತ್ತಿರುವುದು ಎಲ್ಲರಿಗೂ ಗೊತ್ತಿದೆ. ಈ ವಿಚಾರದಲ್ಲಿ ತನಿಖೆ ನಡೆಸಲು ಪೊಲೀಸರಿಗೆ ನಮ್ಮ ಸರ್ಕಾರ ನೀಡಿರುವಷ್ಟು ಸ್ವಾತಂತ್ರ್ಯವನ್ನು ಈ ಹಿಂದಿನ ಯಾವ ಸರ್ಕಾರಗಳೂ ನೀಡಿರಲಿಲ್ಲ’ ಎಂದು ಪೌರಾಡಳಿತ ಸಚಿವ ನಾರಾಯಣ ಗೌಡ ಹೇಳಿದರು.
‘ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಲು ಕೇಂದ್ರ ಮತ್ತು ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿವೆ. ಈ ಮಾಫಿಯಾದಲ್ಲಿ ರಾಜಕಾರಣಿ ಸಹಿತ ಯಾರೇ ಇದ್ದರೂ ಬಿಡುವ ಪ್ರಶ್ನೆಯೇ ಇಲ್ಲ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.