ದಾವಣಗೆರೆ: ರಾಷ್ಟ್ರೀಯ ಲೋಕ ಅದಾಲತ್ನ್ನು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸೆ.13ರಂದು ಹಮ್ಮಿಕೊಳ್ಳಲಾಗಿದ್ದು, ರಾಜಿಯಾಗಬಲ್ಲ 9,916 ಪ್ರಕರಣಗಳ ಇತ್ಯರ್ಥಕ್ಕೆ ಗುರಿ ಹೊಂದಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಡಿ.ಕೆ. ವೇಲಾ ತಿಳಿಸಿದರು.

‘ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಲೋಕ ಅದಾಲತ್ ಆಯೋಜಿಸಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣ ಹಾಗೂ ರಾಜಿಯಾಗಬಲ್ಲ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಅದಾಲತ್ಗೆ ಆಯ್ಕೆ ಮಾಡಲಾಗಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಜಿಲ್ಲೆಯ 25 ನ್ಯಾಯಾಲಯಗಳಲ್ಲಿ 42,701 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಈಗಾಗಲೇ 2,863 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಮಾಡಿದ್ದು, ಅಂತಿಮ ಆದೇಶ ಅದಾಲತ್ ದಿನ ಹೊರಬೀಳಲಿದೆ’ ಎಂದು ವಿವರಿಸಿದರು.

‘ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣ, ಬ್ಯಾಂಕ್ ಪ್ರಕರಣ, ಹಣ ವಸೂಲಾತಿ, ವೇತನ, ಕಾರ್ಮಿಕರ ವಿವಾದ, ವಿದ್ಯುತ್, ನೀರಿನ ಶುಲ್ಕ, ವೈವಾಹಿಕ ವಿವಾದ, ಭೂ ಸ್ವಾಧೀನ, ಕಂದಾಯ ಪ್ರಕರಣ, ಪಾಲು ವಿಭಾಗ, ಜನನ ಮತ್ತು ಮರಣ ಪ್ರಮಾಣ ಪತ್ರ ಸೇರಿದಂತೆ ಇತರ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತದೆ. ಅದಾಲತ್ನಲ್ಲಿ ಬಗೆಹರಿಸಿಕೊಂಡ ಬಳಿಕ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ’ ಎಂದರು.

ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಆರ್. ಗುರುಬಸವರಾಜ್, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣವರ, ವಕೀಲರ ಸಂಘದ ಉಪಾಧ್ಯಕ್ಷ ಕೆ.ಜಿ.ಆರ್.ಸ್ವಾಮಿ, ಕಾರ್ಯದರ್ಶಿ ಎಸ್.ಮಂಜು, ಸಹ ಕಾರ್ಯದರ್ಶಿ ರೇವಣಸಿದ್ದಪ್ಪ ಕೆ.ಎಸ್.ಶಾಗಲೆ, ಖಜಾಂಚಿ ಜಿ.ಇ. ವನಜಾಕ್ಷಿ ಹಾಜರಿದ್ದರು.

ವಿಚಾರಣೆಗೆ ಬಾಕಿ ಇವೆ 42,701 ಪ್ರಕರಣ ಅದಾಲತ್ಗೆ 9,916 ಪ್ರಕರಣಗಳ ಆಯ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ

ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳನ್ನು 90 ದಿನಗಳಲ್ಲಿ ಇತ್ಯರ್ಥ ಮಾಡಲಾಗುತ್ತಿದೆ. 92 ಸಾವಿರ ಪಹಣಿ ಸಮಸ್ಯೆ ಬಗೆಹರಿಸಲಾಗುತ್ತಿದೆ
ಜಿ.ಎಂ.ಗಂಗಾಧರಸ್ವಾಮಿ ಜಿಲ್ಲಾಧಿಕಾರಿ

ಸಂಚಾರ ನಿಯಮ ಉಲ್ಲಂಘಿಸಿದ 15 ಸಾವಿರ ಪ್ರಕರಣಗಳನ್ನು ಜಿಲ್ಲೆಯಲ್ಲಿ ಗುರುತಿಸಲಾಗಿದೆ. ದಂಡ ಪಾವತಿಗೆ ಶೇ 50ರಷ್ಟು ರಿಯಾಯಿತಿ ನೀಡಲಾಗಿದೆ
ಉಮಾ ಪ್ರಶಾಂತ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.