ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೀನ್ ಗ್ಯಾನಗೌಡರ್ ಮೃತದೇಹವನ್ನು ಆಸ್ಪತ್ರೆಗೆ ದಾನ ಮಾಡಿದ ಕುಟುಂಬ

Last Updated 21 ಮಾರ್ಚ್ 2022, 8:52 IST
ಅಕ್ಷರ ಗಾತ್ರ

ಹಾವೇರಿ: ಉಕ್ರೇನ್‌ನಲ್ಲಿ ರಷ್ಯಾ ದಾಳಿಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ಮೃತದೇಹವನ್ನು ದಾವಣಗೆರೆಯ ಶಾಮನೂರು ಶಿವಶಂಕರಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರಕ್ಕೆ ದೇಹ ದಾನ ಮಾಡಲಾಗಿದೆ.

ಕುಟುಂಬದ ಸದಸ್ಯರು ಈ ಹಿಂದೆಯೇ ನವೀನ್ ದೇಹದಾನಕ್ಕೆ ನಿರ್ಧರಿಸಿದ್ದರು. ಅದರಂತೆ, ಇಂದು ಬೆಳಗ್ಗೆ ಮೃತದೇಹ ಚಳಗೇರಿಗೆ ತಲುಪಿದ ಬಳಿಕ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಿ ದೇಹದಾನ ಮಾಡಲಾಗಿದೆ. ಸಂಜೆ ಮೃತದೇಹ ಆಸ್ಪತ್ರೆಗೆ ತಲುಪಲಿದೆ.

ಇದಕ್ಕೂ ಮುನ್ನ, ಪೋಷಕರು, ಗ್ರಾಮಸ್ಥರು ಮತ್ತು ನವೀನ್ ಸ್ನೇಹಿತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದಲ್ಲಿ ಉಕ್ರೇನ್ ಯುದ್ಧದಲ್ಲಿ ಸಾವಿಗೀಡಾದ ನವೀನ ಗ್ಯಾನಗೌಡರ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ನಂತರ ನವೀನ್ ಗ್ಯಾನ ಗೌಡರ್ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಉಕ್ರೇನ್ ನಿಂದ ವಾಪಸಾಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಜತೆ ಮಾತುಕತೆ ನಢಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT