ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಹತಾ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆ

ಮರು ಪರೀಕ್ಷೆಗೆ ಆಗ್ರಹಿಸಿ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
Last Updated 22 ಮಾರ್ಚ್ 2023, 6:04 IST
ಅಕ್ಷರ ಗಾತ್ರ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ವಿವಿಧ ಬೋಧಕೇತರ ಹುದ್ದೆಗಳ ಅರ್ಹತಾ ಪರೀಕ್ಷೆಯಲ್ಲಿ ಕನ್ನಡ ಕಡೆಗಣಿಸಿರುವುದನ್ನು ಖಂಡಿಸಿ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ದಾವಣಗೆರೆ ವಿಶ್ವವಿದ್ಯಾಲಯದ ಎದುರು ಜಮಾಯಿಸಿದ ಸಂಘಟನೆ ಮುಖಂಡರು, ಕಾರ್ಯಕರ್ತರು ಮರುಪರೀಕ್ಷೆಗೆ ಆಗ್ರಹಿಸಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ್ ಅವರಿಗೆ ಮನವಿ ಸಲ್ಲಿಸಿದರು.

‘ಮಾ.19ರಂದು ವಿಶ್ವವಿದ್ಯಾಲಯದ ಅಧೀಕ್ಷಕರು ಹಾಗೂ ಪ್ರಥಮ ದರ್ಜೆ ಸಹಾಯಕರ ಹುದ್ದೆ ನೇಮಕಾತಿ ಪರೀಕ್ಷೆಯನ್ನು ಏಕಕಾಲಕ್ಕೆ ನಡೆಸಿದ್ದು, ಎರಡೂ ಹುದ್ದೆಗಳಿಗೆ ಒಂದೇ
ಪ್ರಶ್ನೆಪತ್ರಿಕೆ ನೀಡಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಕೇವಲ 5 ಪ್ರಶ್ನೆಗಳು ಕನ್ನಡ ಮಾಧ್ಯಮದಲ್ಲಿದ್ದು, ಇನ್ನುಳಿದ 45 ಪ್ರಶ್ನೆಗಳು ಇಂಗ್ಲಿಷ್‌ನಲ್ಲಿವೆ. ಇದರಿಂದಾಗಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಗೊಂದಲಕ್ಕೀಡಾಗಿದ್ದಾರೆ’ ಎಂದು ಸಂಘಟನೆಯ ಸಂಸ್ಥಾಪಕ ರಾಜ್ಯ ಘಟಕದ ಅಧ್ಯಕ್ಷ ವಿ.ಅವಿನಾಶ್ (ಅಭಿ) ದೂರಿದರು.

‘ರಾಜ್ಯದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಕನ್ನಡ ಮತ್ತು ಇಂಗ್ಲಿಷ್ ಎರಡನ್ನೂ ಕ್ರೋಡೀಕರಿಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರದ ಆದೇಶವಿದ್ದರೂ ಇದಕ್ಕೆ ವಿರುದ್ಧವಾಗಿ ನಡೆದಿರುವ ಪರೀಕ್ಷೆಯನ್ನು ರದ್ದುಪಡಿಸಬೇಕು. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ, ಹಾಲಿ ಪರೀಕ್ಷೆಗೆ
ಹಾಜರಾದ ಅಭ್ಯರ್ಥಿಗಳಿಗೆ 7 ದಿನಗಳೊಳಗೆ ಮರು ಪರೀಕ್ಷೆ ನಡೆಸಬೇಕು. ಇಲ್ಲವಾದಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಅವರು ಎಚ್ಚರಿಸಿದರು.

ಸಂಘಟನೆಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಾಲಾ ನಾಗರಾಜ್, ಪದಾಧಿಕಾರಿಗಳಾದ ಆನಂದ ಇಟ್ಟಿಗುಡಿ, ಫಯಾಜ್ ಅಹ್ಮದ್, ಸದ್ದಾಂ ಹುಸೇನ್, ಫಯಾಜ್, ಜಗದೀಶ್, ಮಂಜುನಾಥ್, ಅಕ್ಬರ್ ಬಾಷಾ, ಹನುಮಂತು, ಶಾಂತಮ್ಮ, ಬಸವರಾಜ್, ಚಮನ್ ಶರೀಫ್, ನಟರಾಜ್, ಸುಲೇಮಾನ್, ಪುನೀತ್, ದಾದಾಪೀರ್, ಬಸವರಾಜ್, ರಾಜು ಆನೆಕೊಂಡ, ಹುಲಿಕುಂಟೇಶ್ವರ್ ಪ್ರತಿಭಟನೆಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT