ಹೊನ್ನಾಳಿ: ಜವಾಹರಲಾಲ್ ನೆಹರೂ ಅವರು ಪಂಚವಾರ್ಷಿಕ ಯೋಜನೆಗಳ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಸಹಕಾರ ಸಂಘಗಳ ಸ್ಥಾಪನೆಗೆ ಒತ್ತು ನೀಡಿದ್ದರು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ತಾಲ್ಲೂಕಿನ ಗೊಲ್ಲರಹಳ್ಳಿಯಲ್ಲಿರುವ ಹಾಲು ಶೀತಲೀಕರಣ ಕೇಂದ್ರದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 72ನೇ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು.

ಹಾಲು ಉತ್ಪಾದಕರ ಸಂಘಗಳು ಮಕ್ಕಳ ಶಿಕ್ಷಣಕ್ಕೂ ಸಹಕಾರಿಯಾಗಿವೆ. ಎಷ್ಟೋ ಜನ ತಾಯಂದಿರು ಹಾಲು ಮಾರಿ ಗಳಿಸಿದ ಹಣದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದಾರೆ. ಮೂರು ಜಿಲ್ಲೆಗಳನ್ನು ಒಳಗೊಂಡ ಹಾಲು ಒಕ್ಕೂಟದಿಂದ ಅಂದಾಜು 9 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ರಾಜ್ಯವು ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ ಎಂದರು.

ಸಹಕಾರ ಸಂಘಗಳು ಇಲ್ಲದಿದ್ದರೆ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸಾಲ ಪಡೆಯಲು ಪರದಾಡಬೇಕಾಗುತ್ತಿತ್ತು. ಸಹಕಾರ ಸಂಘಗಳು, ಪತ್ತಿನ ಸಂಘಗಳ ಮೂಲಕ ಸುಲಭವಾಗಿ ಸಾಲ ಸೌಲಭ್ಯ ಪಡೆಯಬಹುದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಕೆಎಂಎಫ್ ನಿರ್ದೇಶಕ ಬಿ.ಜಿ. ಬಸವರಾಜಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಕೆ. ಬಸಪ್ಪ, ಡಿ.ಜಿ. ವಿಶ್ವನಾಥ್, ಸಹಕಾರಿ ಧುರೀಣ ಜಗದೀಶಪ್ಪ ಬಣಕಾರ್ ಮಾತನಾಡಿದರು. ಬಯಲು ಸೀಮೆ ಪ್ರದೇಶಾಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಮರುಳಸಿದ್ದಪ್ಪ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಎಚ್. ಷಣ್ಮುಖಪ್ಪ, ನಿರ್ದೇಶಕ ಡಿ.ಎಸ್. ಸುರೇಂದ್ರ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಕೆ.ಜಿ. ರಮೇಶ್, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಸಿರಿಗೆರೆ ರಾಜಣ್ಣ, ಜಿಲ್ಲಾ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೋಗುಂಡಿ ಬಕ್ಕೇಶಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷೆ ಎಚ್.ಜಿ. ಮಂಜುಳಾ ಗಣೇಶ್, ಎಸ್.ಜಿ. ಶೇಖರ್, ಸಂಜೀವ್ ಕುಮಾರ್, ಮಧು ಶ್ರೀನಿವಾಸ್ ಉಪಸ್ಥಿತರಿದ್ದರು.

ನಾನು ಮತ್ತು ಶಾಂತನಗೌಡರು ಹೊಂದಾಣಿಕೆ ರಾಜಕಾರಣ ಮಾಡಿಲ್ಲ. ರಾಜಕಾರಣವೇ ಬೇರೆ ವಿಶ್ವಾಸವೇ ಬೇರೆ ಸಿದ್ಧಾಂತಗಳೇ ಬೇರೆ. ನಾವಿಬ್ಬರೂ ಚೆನ್ನಾಗಿದ್ದೇವೆ ರಾಜಕಾರಣ ಬಂದಾಗ ರಾಜಕೀಯ ಮಾಡುತ್ತೇವೆ
–ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.