ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಬೀಡಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ

Published 6 ಅಕ್ಟೋಬರ್ 2023, 7:16 IST
Last Updated 6 ಅಕ್ಟೋಬರ್ 2023, 7:16 IST
ಅಕ್ಷರ ಗಾತ್ರ

ದಾವಣಗೆರೆ: ಬೀಡಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೆರಳು ಬೀಡಿ ಕಾರ್ಮಿಕರ ಯೂನಿಯನ್‌ನಿಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಅವರಿಗೆ ಮನವಿ ಸಲ್ಲಿಸಲಾಯಿತು.

ಬೆಂಗಳೂರಿನಲ್ಲಿ ನಿಯೋಗದೊಂದಿಗೆ ಸಚಿವರನ್ನು ಭೇಟಿ ಮಾಡಿದ ಯೂನಿಯನ್‌ ಸದಸ್ಯರು ಬೀಡಿ ಕಾರ್ಮಿಕರ ಸಮಸ್ಯೆಗಳು ಮತ್ತು ಹಕ್ಕೊತ್ತಾಯಗಳ ಬಗ್ಗೆ ಚರ್ಚಿಸಿದರು.

ಕಾರ್ಮಿಕ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಬೀಡಿ ಕಾರ್ಮಿಕರಿಗೆ ಕನಿಷ್ಠ ವೇತನ, ಗ್ರಾಚುಟಿ, ಬೋನಸ್‌, ಭವಿಷ್ಯ ನಿಧಿ, ಗುರುತಿನ ಚೀಟಿ ನೀಡಬೇಕು. ಸೆಸ್‌ ಕಾಯ್ದೆ ಮರುಸ್ಥಾಪಿಸಬೇಕು. ಕಾರ್ಮಿಕರ ಸಮೀಕ್ಷೆ ಕೈಗೊಳ್ಳಬೇಕು. ಬೀಡಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಬೇಕು. ಇಎಸ್‌ಐ ಸೌಲಭ್ಯ ಕಲ್ಪಿಸಬೇಕು. ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಜತೆ ಸಭೆ ನಡೆಸಬೇಕು. ದಾವಣಗೆರೆಯಲ್ಲಿ ಡಿಸ್ಪೆನ್ಸರಿ ಆರಂಭಿಸಬೇಕು ಎಂಬುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿದರು.

ಯೂನಿಯನ್‌ನ ಜಬೀನಾ ಖಾನಂ, ಕರಿಬಸಪ್ಪ ಎಂ, ನಾಜಿಮಾ, ಹಸೀನಾ, ನಗೀನಾ, ಶಾಹೀನಾ, ಶಿರಿನ್, ನೂರ್ ಫಾತಿಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT