ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತವು ವಿಶ್ವಗುರುವಾಗಲು ಹೊಸ ಶಿಕ್ಷಣ ನೀತಿ ಸಹಕಾರಿ: ಪ್ರವೀಣ್‍ಕುಮಾರ್ ಮಾವಿನಕಾಡು

Last Updated 4 ಅಕ್ಟೋಬರ್ 2020, 3:16 IST
ಅಕ್ಷರ ಗಾತ್ರ

ದಾವಣಗೆರೆ:‘ವಿಶ್ವದ ಮೊದಲ ನಾಗರಿಕ ದೇಶವಾದ ಭಾರತದ ಅಸ್ಮಿತೆಗಳನ್ನು ಹಾಗೂ ದೇಶೀಯ ಮೌಲ್ಯಗಳನ್ನು ಯುವ ಸಮುದಾಯಕ್ಕೆ ಅರ್ಪಿಸುವುದರೊಂದಿಗೆ ಭಾರತವನ್ನು ವಿಶ್ವ ಗುರುವನ್ನಾಗಿಸಲುಹೊಸ ಶಿಕ್ಷಣ ನೀತಿ ಸಹಕಾರಿಯಾಗುತ್ತದೆ ಎಂದುಅಂಕಣಕಾರ, ಮೈಸೂರಿನ ಪ್ರವೀಣ್‍ಕುಮಾರ್ ಮಾವಿನಕಾಡು ಹೇಳಿದರು.

ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ಮತ್ತು ಅಖಿಲ ಭಾರತ ಸಾಹಿತ್ಯ ಪರಿಷತ್ ಪಟೇಲ್ ಬಡಾವಣೆ ಘಟಕಗಳ ಸಹಯೋಗದಲ್ಲಿಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ದಾವಣಗೆರೆ ಪ್ರಾದೇಶಿಕ ಕೇಂದ್ರದಲ್ಲಿ ಶನಿವಾರ ನಡೆದ‘ಹೊಸ ಶಿಕ್ಷಣ ನೀತಿ ಮತ್ತು ಭಾರತೀಯತೆಯ ಒಳನೋಟ’ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಹೊಸ ಶಿಕ್ಷಣ ನೀತಿಯು ಇನ್ನೂ ಕೆಲವು ವರ್ಷಗಳ ಕಾಲ ಚರ್ಚೆ ಮತ್ತು ತಿದ್ದುಪಡಿಗೆ ತನ್ನನ್ನು ಮುಕ್ತವಾಗಿ ತೆರೆದುಕೊಂಡಿರುವುದರಿಂದ ಇಂತಹ ಒಂದು ಐತಿಹಾಸಿಕ ಬದಲಾವಣೆಯಲ್ಲಿ ನಾವೆಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕಾದ ಅನಿವಾರ್ಯತೆ ಇದೆ’ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಹೊಸ ಶಿಕ್ಷಣ ನೀತಿಯ ಪ್ರಚಾರ ರಾಯಭಾರಿಯಾಗಿ ಮತ್ತು ಕರ್ನಾಟಕದಲ್ಲಿ ಮೊದಲ ಅಧಿಕೃತ ಪ್ರಚಾರ ಶಿಕ್ಷಣ ಸಂಸ್ಥೆಯಾಗಿ ಮಾನ್ಯತೆ ಪಡೆದ ದಾವಣಗೆರೆ ಪ್ರಾದೇಶಿಕ ಕೇಂದ್ರದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.

ಎಂವೈಎನ್ಇಪಿ ಪ್ರಚಾರ ರಾಯಭಾರಿ ಹಾಗೂ ಪ್ರಾದೇಶಿಕ ನಿರ್ದೇಶಕ ಡಾ.ಸುಧಾಕರ ಹೊಸಳ್ಳಿ,ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಸಂಚಾಲಕ ಷಣ್ಮುಖಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT