ಮಂಗಳವಾರ, ಜೂನ್ 28, 2022
28 °C

ನವ ವಿವಾಹಿತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯರಬಳ್ಳಿ ತಾಂಡಾ (ಉಚ್ಚಂಗಿದುರ್ಗ): ತೌಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಬಳ್ಳಿ ತಾಂಡಾದಲ್ಲಿ ಮಂಗಳವಾರ ನವ ವಿವಾಹಿತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಹಾಂತೇಶ್ ನಾಯ್ಕ (24) ಆತ್ಮಹತ್ಯೆ ಮಾಡಿಕೊಂಡವರು.

‘ಒಂದು ವರ್ಷದಿಂದ ಮಹಾಂತೇಶ್ ನಾಯ್ಕ ಮೂರ್ಛೆರೋಗ (ಅಪಸ್ಮಾರ)ದಿಂದ ಬಳಲುತ್ತಿದ್ದರು. ಹಲವು ವೈದ್ಯರಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಪ್ರಯೋಜನ ಆಗಿರಲಿಲ್ಲ. ಇದರಿಂದ ಖಿನ್ನತೆಗೆ ಒಳಗಾಗಿದ್ದರು.  ಮಂಗಳವಾರ ಕುಟುಂಬದ ಸದಸ್ಯರೊಂದಿಗೆ ಹೊಲದಲ್ಲಿ ಕೆಲಸ ಮುಗಿಸಿ, ಬಳಿಕ ವಿಷ ಸೇವಿಸಿದ್ದಾರೆ. ದಾವಣಗೆರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ’ ಎಂದು ಕುಟುಂಬದವರು ತಿಳಿಸಿದ್ದಾರೆ.

ಅವರಿಗೆ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಅಂತ್ಯಕ್ರಿಯೆಯನ್ನು ಬುಧವಾರ ಅವರ ಜಮೀನಿನಲ್ಲಿ ನೆರವೇರಿಸಲಾಯಿತು. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು