ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ದಮನಿಸುವ ತಿರುಕನ ಕನಸು ಕೈಬಿಡಲಿ

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ
Last Updated 24 ಜೂನ್ 2022, 3:01 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಹೊನ್ನಾಳಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೇಂದ್ರದ ಬಿಜೆಪಿ ಸರ್ಕಾರ ಇ.ಡಿ. ಮುಂದಿಟ್ಟುಕೊಂಡು ವಿನಾಕಾರಣ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ಜಿಲ್ಲಾ ಅಧ್ಯಕ್ಷ ಎಚ್.ಬಿ. ಮಂಜಪ್ಪ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜಾರಿ ನಿರ್ದೇಶನಾಲಯ ಮುಂದಿಟ್ಟುಕೊಂಡು ಕಾಂಗ್ರೆಸ್ ಅನ್ನು ದಮನಿಸಬಹುದು ಎಂಬ ತಿರುಕನ ಕನಸು ಕಾಣುವುದನ್ನು ಕೇಂದ್ರದ ಬಿಜೆಪಿ ಸರ್ಕಾರ ಕೈಬಿಡಬೇಕು. ಇಂತಹ ಕೀಳುಮಟ್ಟದ ರಾಜಕಾರಣವನ್ನು ದೇಶದ ಜನ ಸಹಿಸುವುದಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೆಲಕಚ್ಚಲಿದೆ. ಮತ್ತೆ ಆ ಪಕ್ಷ ತಲೆ ಎತ್ತುವುದು ಅನುಮಾನ ಎಂದು ಜಿಲ್ಲಾ ಅಧ್ಯಕ್ಷ ಎಚ್‌.ಬಿ. ಮಂಜಪ್ಪ ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರಪತಿ ಅವರು ಮಧ್ಯಪ್ರವೇಶಿಸಿ ದ್ವೇಷದ ರಾಜಕಾರಣ ಬಿಟ್ಟು ಅಭಿವೃದ್ಧಿ ಕಡೆ ಗಮನಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.

ರಾಜಕೀಯ ದ್ವೇಷಕ್ಕಾಗಿ ರಾಹುಲ್‍ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿ ವಿನಾಕಾರಣ ಕಿರುಕುಳ ನೀಡುತ್ತಿರುವುದು ಖಂಡನೀಯ ಎಂದು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಕಾಂಗ್ರೆಸ್ ನಾಯಕರನ್ನು ಇ.ಡಿ. ವಿಚಾರಣೆಗೆ ಒಳಳಪಡಿಸಿದಂತೆ ಬಿಜೆಪಿ ನಾಯಕರಾದ ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಮತ್ತು ಎಂ.ಪಿ. ರೇಣುಕಾಚಾರ್ಯ ಅವರ ಆಸ್ತಿ ಕುರಿತು ತನಿಖೆ ಮಾಡಿಸಿ ಇ.ಡಿ. ವಿಚಾರಣೆಗೊಳಪಡಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಮುಖಂಡರಾದ ಬಿ. ಸಿದ್ದಪ್ಪ, ಡಾ.ಈಶ್ವರನಾಯ್ಕ, ಎಚ್.ಎ. ಉಮಾಪತಿ, ರಮೇಶ್ ತರಗನಹಳ್ಳಿ, ಮಧುಗೌಡ ಅರಕೆರೆ, ತಾಲ್ಲೂಕು ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ ಮಾತನಾಡಿದರು.

ಅರಕೆರೆ ನರಸಪ್ಪ, ಕುಳಗಟ್ಟೆ ಶೇಖರಪ್ಪ, ಸಾಸ್ವೆಹಳ್ಳಿ ಸುಲೇಮಾನ್, ಪುರಸಭೆ ಮಾಜಿ ಸದಸ್ಯರಾದ ಅಣ್ಣಪ್ಪ, ವಿಜೇಂದ್ರಪ್ಪ, ಬೀರಪ್ಪ, ಸರಳಿಮನೆ ರಾಜು, ಕೆಂಗಲಹಳ್ಳಿ ಪ್ರಭಾಕರ್, ಎನ್‍ಎಸ್‍ಯುಐ ಘಟಕದ ತಾಲ್ಲೂಕು ಅಧ್ಯಕ್ಷ ಮನೋಜ್ ವಾಲಜ್ಜಿ, ಯುವ ಕಾಂಗ್ರೆಸ್‍ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜಿತ್ ಮತ್ತು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT