ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆರೆ ಅಭಿವೃದ್ಧಿಯಿಂದ ಅಂತರ್ಜಲ ಮಟ್ಟ ಹೆಚ್ಚಳ

ಚನ್ನಗಿರಿ ತಾಲ್ಲೂಕಿನ ಆಗರಬನ್ನಿಹಟ್ಟಿ ಗ್ರಾಮದ ಕೆರೆ ಆಯ್ಕೆ
Published 16 ಜನವರಿ 2024, 16:24 IST
Last Updated 16 ಜನವರಿ 2024, 16:24 IST
ಅಕ್ಷರ ಗಾತ್ರ

ಆಗರಬನ್ನಿಹಟ್ಟಿ(ಚನ್ನಗಿರಿ):  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ನಮ್ಮೂರು ನಮ್ಮ ಕೆರೆ’ ಯೋಜನೆ ಅಡಿ 300 ವರ್ಷ ಇತಿಹಾಸವಿರುವ ಊರ ಮುಂದಿನ ಕೆರೆಯನ್ನು ಅಭಿವೃದ್ಧಿಗೊಳಿಸಲು ಆಯ್ಕೆ ಮಾಡಿರುವುದು ಸಾಗತಾರ್ಹ. ಈ ಮೂಲಕ ಅಂತರ್ಜಲ ಮಟ್ಟ ಹೆಚ್ಚಳವಾಗಿ ರೈತರಿಗೆ ಅನುಕೂಲವಾಗಲಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರಾ ತಿಳಿಸಿದರು.

ತಾಲ್ಲೂಕಿನ ಆಗರಬನ್ನಿಹಟ್ಟಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಗಳವಾರ ನಡೆದ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಅಧಿಕಾರಿ ಕೆ.ಹನುಮಂತಪ್ಪ ಮಾತನಾಡಿ, ‘ಯೋಜನೆ ಅಡಿ ರಾಜ್ಯದ 638 ಕೆರೆಗಳ ಹೂಳೆತ್ತಲಾಗಿದೆ. ಕೆರೆಗಳ ಪುನಶ್ಚೇತನದಿಂದಾಗಿ ಮಳೆಗಾಲದಲ್ಲಿ ಮಳೆ ನೀರು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗಿ ರೈತರ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗಿ ರೈತರ ಬದುಕು ಹಸನಾಗಲಿದೆ’ ಎಂದರು.

ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಕೆರೆ ಎಂಜಿನಿಯರ್ ಹರೀಶ್, ಮೇಲ್ವಿಚಾರಿಕರಾದ ಶಾರದಾ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಿತ್ರಲಿಂಗಪ್ಪ, ಅನ್ನಪೂರ್ಣ, ಒಕ್ಕೂಟದ ಅಧ್ಯಕ್ಷೆ ಶೈಲಜಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT