ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧ್ಯಾನದಿಂದ ಗುಣಾತ್ಮಕ ವ್ಯಕ್ತಿತ್ವ ನಿರ್ಮಾಣ

ವಿವೇಕಾನಂದ ಜಯಂತಿಯಲ್ಲಿ ಶಾರದೇಶಾನಂದ ಶ್ರೀ
Published 18 ಜನವರಿ 2024, 16:01 IST
Last Updated 18 ಜನವರಿ 2024, 16:01 IST
ಅಕ್ಷರ ಗಾತ್ರ

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟೀಯ ಸೇವಾ ಯೋಜನೆ ಘಟಕದಿಂದ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾದಾಯಿನಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮೇಘಾಲಯದ ಬಡ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ ಮತ್ತು ಶೈಕ್ಷಣಿಕ ಸಾಮಗ್ರಿಗಳನ್ನು ಕಾಲೇಜಿನ ಅಧ್ಯಾಪಕರು ನೀಡುತ್ತಿರುವುದು, ಹಸಿದವರ ಹೊಟ್ಟೆಗೆ ಮೊದಲು ಅನ್ನ ನೀಡಿ ನಂತರ ಧರ್ಮ ಬೋಧನೆ ಮಾಡಿ ಎಂಬ ವಿವೇಕಾನಂದರ ಮಾತಿಗೆ ಪೂರಕವಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಪ್ರಾಂಶುಪಾಲ ಪ್ರೊ.ಎಚ್.ವಿರೂಪಾಕ್ಷಪ್ಪ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾದಾಯಿನಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಡಿ.ಜಿ.ರಾಜೇಶ್ವರಿ, ಐಕ್ಯೂಎಸ್‌ಸಿ ಸಂಯೋಜಕ ಜಿ.ಎಸ್.ಸುರೇಶ, ಪಿ.ಎಸ್.ಐ ಶ್ರೀಪತಿ ಗಿನ್ನಿ, ರಮೇಶ್ ಎಂ.ಎನ್., ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ್ ಎಸ್., ದಾವಣಗೆರೆ ವಿವಿಯ ಅಧ್ಯಾಪಕ ಉಚ್ಚೇಗೌಡ, ಕನ್ನಡ ವಿಭಾಗದ ಮುಖ್ಯಸ್ಥೆ ಎಸ್.ಗೌರಮ್ಮ ಮಾತನಾಡಿದರು. ಮೇಘಾಲಯದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರಥಮ ಬಿ.ಎ. ವಿದ್ಯಾರ್ಥಿನಿ ಅರ್ಪಿತಾ ಪ್ರಾರ್ಥಿಸಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ಕುಮಾರ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಅನುರಾಧಾ ನಿರೂಪಿಸಿದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಬಿ.ಕೆ.ಮಂಜುನಾಥ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT