ಹೊನ್ನಾಳಿ: ‘ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಈಚೆಗೆ ಸುರಿದ ಮಳೆಗೆ ಮನೆ, ರಸ್ತೆ, ಸೇತುವೆ ಕೆರೆಕಟ್ಟೆ ಮತ್ತು ಬೆಳೆಗಳು ಹಾನಿಗೀಡಾಗಿದ್ದು, ಮೂರು ದಿನಗಳಲ್ಲಿ ನನಗೆ ನಿಖರ ಮಾಹಿತಿ ನೀಡಬೇಕು’ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಾಮಾರ್ಥ್ಯ ಸೌಧದಲ್ಲಿ ಕರೆದಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅವಳಿ ತಾಲ್ಲೂಕಿನಲ್ಲಿ ಸುಮಾರು 35 ಹಳ್ಳಿಗಳ ಪ್ರವಾಸ ಮಾಡಿದ್ದು, ಈ ಸಂದರ್ಭದಲ್ಲಿ 40 ಕೆರೆಕಟ್ಟೆಗಳು ಸೇರಿ ನಾಲೆಗಳು, ರಸ್ತೆ, ಸೇತುವೆಗಳು ಒಡೆದು ಹೋಗಿವೆ. ಮೆಕ್ಕೆಜೋಳ, ಈರುಳ್ಳಿ ಬೆಳೆ, ಅಡಿಕೆ ಗಿಡಗಳಿಗೆ ಹಾನಿ ಸಂಭವಿಸಿದೆ. ಕಂದಾಯ, ಕೃಷಿ, ತೋಟಗಾರಿಕೆ, ಸಣ್ಣ ನೀರಾವರಿ ಹಾಗೂ ಪಿಡಬ್ಲ್ಯುಡಿ ಇಲಾಖೆ ವತಿಯಿಂದ ಜಂಟಿ ಸಮೀಕ್ಷೆ ನಡೆಸಬೇಕು. ನಷ್ಟದ ಮಾಹಿತಿ ನಿಖರವಾಗಿರಬೇಕು ಎಂದು ಹೇಳಿದರು.

ಹೊನ್ನಾಳಿ ತಾಲ್ಲೂಕಿನಲ್ಲಿ 294 ಹೆಕ್ಟೇರ್ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ 468 ಹೆಕ್ಟೇರ್ ಹಾಗೂ 147 ಹೆಕ್ಟೇರ್ ತೋಟಗಾರಿಕೆ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದರು.

ಹೊನ್ನಾಳಿ ತಾಲ್ಲೂಕಿನಲ್ಲಿ 105 ಮನೆಗಳು ಭಾಗಶ: ಮತ್ತು 6 ಮನೆಗಳಿಗೆ ತೀವ್ರ ಹಾನಿ ಸಂಭವಿಸಿದೆ. ನ್ಯಾಮತಿ ತಾಲ್ಲೂಕಿನಲ್ಲಿ 117 ಮನೆಗಳು ಭಾಗಶ: ಹಾನಿಗೊಳಗಾಗಿವೆ ಎಂದು ತಿಳಿಸಿದರು.

ಹೊನ್ನಾಳಿ ತಾಲ್ಲೂಕಿನ ರಾಂಪುರದಲ್ಲಿ ಒಂದು ಶಾಲಾ ಕೊಠಡಿಗೆ ಹಾನಿಯಾಗಿದೆ ಎಂದು ಬಿಇಒ ರಾಜೀವ್ ಹೇಳಿದರು.

ಹೊನ್ನಾಳಿ ತಾಲ್ಲೂಕಿನಲ್ಲಿ ರಸ್ತೆ, ಸೇತುವೆ, ಕೆರೆ, ನಾಲೆಗಳು ಸೇರಿ ಒಟ್ಟು ₹ 149.50 ಲಕ್ಷ, ಸವಳಂಗ ಭಾಗದ ಕೆರೆ ಹಾನಿಯಿಂದ ಅಂದಾಜು ₹ 22 ಲಕ್ಷ ನಷ್ಟ ಸಂಭವಿಸಿದೆ. ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಬರುವ ಕೆರೆ, ನಾಲೆ, ಸಣ್ಣ ಸೇತುವೆಗಳ ಹಾನಿಯಿಂದಾಗಿ ₹ 766 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಹಶೀಲ್ದಾರ್ ತಿಳಿಸಿದರು.

ಬೆಸ್ಕಾಂ ಎಇಇ ರವಿಕಿರಣ್ ಮಾತನಾಡಿ, ಮಳೆಯಿಂದ ಇಲಾಖೆಯ ವ್ಯಾಪ್ತಿಯಲ್ಲಿ ಒಟ್ಟು ₹ 33 ಲಕ್ಷ ಹಾನಿ ಸಂಭವಿಸಿದೆ ಎಂದರು.

ಇಲಾಖೆಗಳ ಮಾಹಿತಿಯನ್ನು ಕ್ರೋಡೀಕರಿಸಿ ತಾಲ್ಲೂಕಿನಲ್ಲಿ ಒಟ್ಟು ಅಂದಾಜು ನಷ್ಟದ ಮಾಹಿತಿಯನ್ನು ಮೂರು ದಿನಗಳ ಒಳಗೆ ನೀಡಬೇಕು. ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಹೇಳಿದರು.

ನ್ಯಾಮತಿ ತಹಶೀಲ್ದಾರ್ ತನುಜಾ ಟಿ. ಸವದತ್ತಿ, ತಾಲ್ಲೂಕು ಪಂಚಾಯಿತಿ ಇಒ ರಾಮಭೋವಿ, ಸಿಪಿಐ ಟಿ.ವಿ. ದೇವರಾಜ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.