ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇತುವೆ ನಿರ್ಮಾಣ- ₹ 2 ಕೋಟಿ ಅನುದಾನ ಬಿಡುಗಡೆ: ಬೈರತಿ ಬಸವರಾಜ

ಹರಿಹರ ತಾಲ್ಲೂಕಿನ ಕೊಂಡಜ್ಜಿ-ಅರಸೀಕೆರೆ ಸಂಪರ್ಕ ಸೇತುವೆ ನಿರ್ಮಾಣ
Last Updated 7 ಆಗಸ್ಟ್ 2021, 1:52 IST
ಅಕ್ಷರ ಗಾತ್ರ

ಹರಿಹರ: ತಾಲ್ಲೂಕಿನ ಕೊಂಡಜ್ಜಿ-ಅರಸೀಕೆರೆ ಸಂಪರ್ಕ ಸೇತುವೆ ನಿರ್ಮಾಣಕ್ಕೆ ₹ 2 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಸಚಿವ ಬೈರತಿ ಬಸವರಾಜ ಭರವಸೆ ನೀಡಿದರು.

ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ನೆರೆಪೀಡಿತ ಪ್ರದೇಶ ಹಾಗೂ ಪ್ರವಾಹದಿಂದ ಕೊಚ್ಚಿ ಹೋದ ಸೇತುವೆಯನ್ನು ಶುಕ್ರವಾರ ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಮಳೆ ಹೆಚ್ಚಾದಾಗ ಸೇತುವೆ ಮೇಲೆ ಸಂಚರಿಸುವುದು ದುಸ್ತರವಾಗುತ್ತದೆ. ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂಬ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸಚಿವರು, ಸೇತುವೆ ನಿರ್ಮಾಣಕ್ಕೆ ₹ 2 ಕೋಟಿಯ ಪ್ರಸ್ತಾವನೆ ಕಳುಹಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಿದರು.

ಕಾಗಿನೆಲೆ ಶ್ರೀಗಳ ಆಶೀರ್ವಾದ ಪಡೆದ ಸಚಿವ: ಮಳೆ ಹಾನಿ ಪ್ರದೇಶದ ಪರಿಶೀಲನೆಗೂ ಮುನ್ನ ಬೆಳ್ಳೂಡಿಯ ಕಾಗಿನೆಲೆ ಕನಕ ಪೀಠದ ಶಾಖಾ ಮಠಕ್ಕೆ ಭೇಟಿ ನೀಡಿದ ಸಚಿವ ಬೈರತಿ ಬಸವರಾಜ ಮತ್ತೆ ಸಚಿವ ಸ್ಥಾನ ಪಡೆದ ಹಿನ್ನೆಲೆ ಕಾಗಿನೆಲೆ ಪೀಠದ ಅವರು ನಿರಂಜನಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‍, ಜಿಲ್ಲಾ ಪಂಚಾಯಿತಿ ಸಿಇಒ ಮಹಾಂತೇಶ್‍ ದಾನಮ್ಮನವರ್‍, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‍, ದೂಡಾ ಆಯುಕ್ತ ಬಿ.ಟಿ. ಕುಮಾರಸ್ವಾಮಿ, ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಇಒ ಜಿ.ಡಿ. ಗಂಗಾಧರನ್‍, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್‍.ಎಂ. ವೀರೇಶ್‍ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT