ಸೋಮವಾರ, ಸೆಪ್ಟೆಂಬರ್ 20, 2021
30 °C

ವಿಷಾಹಾರ ಸೇವನೆ 49 ಜನ ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹರಿಹರ: ತಾಲ್ಲೂಕಿನ ಭಾನುವಳ್ಳಿ ಗ್ರಾಮದಲ್ಲಿ ತೊಟ್ಟಿಲು ಕಾರ್ಯಕ್ರಮದಲ್ಲಿ ಊಟ ಮಾಡಿದ ಮಕ್ಕಳು‌, ವಯಸ್ಕರು ಸೇರಿ‌ 49 ಜನರು ಅಸ್ವಸ್ಥರಾದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಗ್ರಾಮದಲ್ಲಿ ಸೋಮವಾರ ರಾತ್ರಿ ತೊಟ್ಟಿಲು ಕಾರ್ಯಕ್ರಮದಲ್ಲಿ ಊಟಕ್ಕೆ ಶ‍್ಯಾವಿಗೆ ಪಾಯಸ ಮಾಡಲಾಗಿತ್ತು. ಸಿಹಿಯೂಟ ಮಾಡಿದ 49 ಜನರಲ್ಲಿ ವಾಂತಿ ಹಾಗೂ ವಾಂತಿಯ ಲಕ್ಷಣಗಳು ಗೋಚರಿಸಲಾರಂಭಿಸಿದವು. ಕೂಡಲೇ ಎಲ್ಲರನ್ನೂ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ನಂತರ, ಬಹುತೇಕ ಎಲ್ಲರೂ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 5 ವರ್ಷದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.