ಮಂಗಳವಾರ, ಸೆಪ್ಟೆಂಬರ್ 21, 2021
22 °C
ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕರೆ

ಜನಜಾಗೃತಿ ಯುವ ಕಾರ್ಯಕರ್ತರ ಹೊಣೆ: ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಿಹರ: ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳ ಬಗ್ಗೆ ಜನ ಜಾಗೃತಿ ಮೂಡಿಸದಿದ್ದರೆ ವಾಜಪೇಯಿ ಕಾಲದಲ್ಲಿ ನಡೆದ ರಾಜಕೀಯ ಹಿನ್ನಡೆ ಮರುಕಳಿಸುವ ಅಪಾಯವಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು.

ನಗರದ ಎಚ್‍.ಕೆ. ವೀರಪ್ಪ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಯುವಮೋರ್ಚಾದಿಂದ ಶನಿವಾರ ನಡೆದ ಜಿಲ್ಲಾ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.

ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರ ರೂಪಿಸಿದ ಅನೇಕ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ವಿಫಲರಾದ ಕಾರಣ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದಿಂದ ದೂರ ಉಳಿಯುವ ಅನಿವಾರ್ಯತೆ ಸೃಷ್ಟಿಯಾಗಿತ್ತು. ಈ ತಪ್ಪು ಭವಿಷ್ಯದಲ್ಲಿ ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಕರೆ ನೀಡಿದರು.

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ‘ಯುವ ಕಾರ್ಯಕರ್ತರು ಪಕ್ಷದ ಶಕ್ತಿ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಹೊಣೆ ಯುವಮೋರ್ಚಾ ಕಾರ್ಯಕರ್ತರ ಮೇಲಿದೆ’ ಎಂದರು.

ರಾಜ್ಯ ಸರ್ಕಾರದ ನೂತನ ಯೋಜನೆಗಳಾದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಧನ, ಸಾಮಾಜಿಕ ಭದ್ರತೆ ವೇತನ ಹೆಚ್ಚಳ, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಸಚಿವಾಲಯ ಹಾಗೂ ಮಹಿಳಾ ಸಬಲೀಕರಣದ ಯೋಜನೆಗಳನ್ನು ಮತದಾರರಿಗೆ ತಲುಪಿಸಬೇಕು. ಭವಿಷ್ಯದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 135 ಸ್ಥಾನಗಳಲ್ಲಿ ಗೆಲುವು ಸಾಧಿಸುವಂತೆ ಕಾರ್ಯ ನಿರ್ವಹಿಸಬೇಕು’ ಎಂದು ಕರೆ ನೀಡಿದರು.

ರಾಜ್ಯದಲ್ಲಿ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳ ನಂತರ ಮುಂದಿನ ವರ್ಷ ವಿಧಾನಸಭೆ, ನಂತರ ಲೋಕ ಸಭೆ ಚುನಾವಣೆಗಳು ನಡೆಯಲಿವೆ. ಇದಕ್ಕೆ ಕಾರ್ಯಕರ್ತರು ಸನ್ನದ್ಧರಾಗಿರಬೇಕು ಎಂದು ಮಾಜಿ ಶಾಸಕ ಬಿ.ಪಿ. ಹರೀಶ್‍ ತಿಳಿಸಿದರು.

ಯುವಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಡಾ.ಸಂದೀಪ ಕುಮಾರ್‍ ಮಾತನಾಡಿ, ‘ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಯುವಕರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ಪಕ್ಷ ಬಿಜೆಪಿ. ನಿಮ್ಮ ಕಾರ್ಯ ತತ್ಪರತೆ ಹಾಗೂ ಸಾಮಾಜಿಕ ಕಳಕಳಿಯಿಂದ ಭವಿಷ್ಯದಲ್ಲಿ ಪಕ್ಷದಲ್ಲಿ ಉನ್ನತ ಸ್ಥಾನ ಪಡೆಯಬಹುದು’ ಎಂದರು.

ಬಿಜೆಪಿ ಯುವಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಆರ್‍.ಎಲ್‍. ಶಿವಪ್ರಕಾಶ್‍ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಪ್ರೊ.ಲಿಂಗಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎಂ. ವಾಗೀಶ ಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್‍.ಎಂ. ವೀರೇಶ್‍, ದೂಡಾ ಸದಸ್ಯ ರಾಜು. ಎಂ. ರೋಖಡೆ, ಯುವಮೋರ್ಚಾದ ತಾಲ್ಲೂಕು ಘಟಕದ ಅಧ್ಯಕ್ಷ ರವಿ ರಾಯ್ಕರ್‍ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು