ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 20 ಲಕ್ಷದ ವೈದ್ಯಕೀಯ ಉಪಕರಣ ಕೊಡುಗೆ

ಬೆಂಗಳೂರಿನ ಪವರ್ ಸಿಸ್ಟಂ ಆಪರೇಷನ್ ಕಾರ್ಪೊರೇಷನ್ ಕಂಪನಿ
Last Updated 3 ಜುಲೈ 2021, 3:34 IST
ಅಕ್ಷರ ಗಾತ್ರ

ಚನ್ನಗಿರಿ: ಬೆಂಗಳೂರಿನ ಪವರ್ ಸಿಸ್ಟಂ ಆಪರೇಷನ್ ಕಾರ್ಪೊರೇಷನ್ ಕಂಪನಿಯು ತಾಲ್ಲೂಕಿನ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ₹ 20 ಲಕ್ಷ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ನೀಡಿರುವುದಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಬೆಂಗಳೂರಿನ ಪವರ್ ಆಪರೇಷನ್ ಕಾರ್ಪೊರೇಷನ್ ಕಂಪನಿಯ ವೈದ್ಯಕೀಯ ಉಪಕರಣ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಶ್ರಮಿಸಿದ್ದರ ಫಲವಾಗಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, 2ನೇ ಅಲೆಯನ್ನು ಹೇಗೆ ನಿಯಂತ್ರಿಸಲಾಯಿತೋ ಅದೇ ರೀತಿ 3ನೇ ಅಲೆ ತಡೆಗಟ್ಟಲು ಶ್ರಮಿಸಬೇಕು ಎಂದು ಹೇಳಿದರು.

ಕಂಪನಿಯ ಮುಖ್ಯ ಎಂಜಿನಿಯರ್ ಮಂಜು ರಾಜಣ್ಣ, ಕಂಪನಿಯ ಸಿಎಸ್‌ಆರ್ ನಿಧಿಯಿಂದ ತಾಲ್ಲೂಕಿಗೆ ₹ 20 ಲಕ್ಷ ಮೌಲ್ಯದ ಉಪಕರಣಗಳನ್ನು ಸಂತೇಬೆನ್ನೂರು, ಕೆರೆಬಿಳಚಿ ಹಾಗೂ ಚನ್ನಗಿರಿ ಆರೋಗ್ಯ ಕೇಂದ್ರಗಳಿಗೆ ನೀಡಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಕಂಪನಿಯ ಮುಖ್ಯ ಎಂಜಿನಿಯರ್ ಅವರು ತಾವು ಹುಟ್ಟಿದ ತಾಲ್ಲೂಕಿಗೆ ಉಪಕರಣಗಳ ಕೊಡುಗೆ ನೀಡಿರುವುದು ಹೆಮ್ಮೆಯ ಸಂಗತಿ. ಇವುಗಳ ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ಪ್ರಭು, ಆಡಳಿತ ವೈದ್ಯಾಧಿಕಾರಿ ಡಾ.ಅಶೋಕ್, ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಿ, ಸದಸ್ಯರಾದ ಪಿ.ಬಿ. ನಾಯಕ್, ಪಟ್ಲಿ ನಾಗರಾಜ್, ಗುರುಸಿದ್ದಯ್ಯ, ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ರಾಜಣ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT