ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Last Updated 22 ಸೆಪ್ಟೆಂಬರ್ 2021, 4:39 IST
ಅಕ್ಷರ ಗಾತ್ರ

ಜಗಳೂರು: ತಾಲ್ಲೂಕಿನಲ್ಲಿ ಸೂರಿಲ್ಲದ ಬಡವರಿಗೆ ವಸತಿ ಮತ್ತು ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಪಟ್ಟಣ ಪಂಚಾಯಿತಿ ಕಚೇರಿ ಹಾಗೂ ತಹಶೀಲ್ದಾರ್ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಲಾಯಿತು.

ಅತ್ಯಂತ ಹಿಂದುಳಿದ ತಾಲ್ಲೂಕಿನಲ್ಲಿ ಬಡವರ ಸಂಖ್ಯೆ ಹೆಚ್ಚಾಗಿದ್ದು, ಪಟ್ಟಣದಲ್ಲಿ ಸೂರಿಲ್ಲದ ಕಾರ್ಮಿಕ ಹಾಗೂ ಕೂಲಿಕಾರರ ಕುಟುಂಬಗಳು ಸೂರಿಗಾಗಿ ಪರದಾಡುವಂತಾಗಿದೆ. ಸರ್ಕಾರದ ವಸತಿ ಯೋಜನೆಗಳಡಿ ಅರ್ಹ ಬಡವರಿಗೆ ನಿವೇಶನ ಮತ್ತು ಮನೆಗಳನ್ನು ಮಂಜೂರು ಮಾಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಮಹಾಂತೇಶ್, ‘ಹಲವು ವರ್ಷಗಳಿಂದ ಪಟ್ಟಣ ಹಾಗೂ ತಾಲ್ಲೂಕಿನಲ್ಲಿ ಅರ್ಹ ಬಡ ಕುಟುಂಬಗಳಿಗೆ ವಸತಿ ಯೋಜನೆಯಡಿ ಮನೆಗಳು ಮಂಜೂರಾಗಿಲ್ಲ. ಕೂಡಲೇ ಅರ್ಹರಿಗೆ ವಸತಿ ಮತ್ತು ನಿವೇಶನ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ತಿಪ್ಪೇಸ್ವಾಮಿ, ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಹಾಗೂ ತಹಶೀಲ್ದಾರ್ ನಾಗವೇಣಿ ಅವರಿಗೆ ಮನವಿ ಸಲ್ಲಿಸಲಾಯಿತು. ಕರವೇ ಪದಾಧಿಕಾರಿಗಳಾದ ಸಂಗೊಳ್ಳಿ ಸುರೇಶ್, ಹರ್ಷ, ಆರ್. ಓಬಳೇಶ್, ಅಬ್ದುಲ್ ರಖೀಬ್, ತಿಪ್ಪೇಸ್ವಾಮಿ, ಶಾಹೀನಾ ಬೇಗಂ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT