ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರೇಮಳಲಿ ಗ್ರಾಮದಲ್ಲಿ ಚರಂಡಿಗಳೇ ಮಾಯ

Published 3 ಜುಲೈ 2024, 15:51 IST
Last Updated 3 ಜುಲೈ 2024, 15:51 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕಿನ ಹಿರೇಮಳಲಿ ಗ್ರಾಮದಲ್ಲಿ ಸ್ವಚ್ಛತೆ ಮಾಯವಾಗಿದ್ದು, ಕೆಲವು ಬೀದಿಗಳಲ್ಲಿ ಚರಂಡಿಗಳೇ ಇಲ್ಲದ ಕಾರಣ ಗ್ರಾಮಸ್ಥರು ನಾನಾ ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಕೆಲವು ಬೀದಿಗಳಲ್ಲಿ ಇರುವ ಚರಂಡಿಗಳಲ್ಲಿ ಯಥೇಚ್ಛ ಪ್ರಮಾಣದಲ್ಲಿ ಹೂಳು ತುಂಬಿದೆ. ಚರಂಡಿಗಳನ್ನು ಸ್ವಚ್ಛಗೊಳಿಸಲು ಗ್ರಾಮ ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ.

ಸ್ವಾತಂತ್ರ್ಯ ಬಂದು 77 ವಸಂತಗಳು ಕಳೆದರೂ ಗ್ರಾಮಗಳಲ್ಲಿ ಸಮರ್ಪಕವಾದ ಚರಂಡಿ ನಿರ್ಮಿಸದಿರುವುದು ಆಡಳಿತದ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಂತಾಗಿದೆ. ಕೂಡಲೇ ಗ್ರಾಮದಲ್ಲಿರುವ ಚರಂಡಿಗಳ ಹೂಳನ್ನು ತೆಗೆಯಿಸಿ, ಹೊಸ ಚರಂಡಿಗಳನ್ನು ನಿರ್ಮಿಸಲು ಗ್ರಾಮ ಪಂಚಾಯಿತಿ ಆಡಳಿತ ಮುಂದಾಗಬೇಕು.

ನೊಂದ ಗ್ರಾಮಸ್ಥರು, ಹಿರೇಮಳಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT