ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಸಿಬ್ಬಂದಿ

ಕೊರೊನಾ ನಿರೋಧಕ ಲಸಿಕೆ ಸಾಗಾಟ
Last Updated 18 ಆಗಸ್ಟ್ 2021, 5:04 IST
ಅಕ್ಷರ ಗಾತ್ರ

ದಾವಣಗೆರೆ: ಹರಿಹರ ತಾಲ್ಲೂಕಿನ ಕೊಕ್ಕನೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕೋವಿಶೀಲ್ಡ್ ವಯಲ್ಸ್‌ ಸಾಗಿಸುತ್ತಿದ್ದ ಇಬ್ಬರನ್ನು ಗ್ರಾಮಸ್ಥರು ಹಿಡಿದಿದ್ದಾರೆ.

ಫಾರ್ಮಾಸಿಸ್ಟ್ ಲಕ್ಷ್ಮಣ್ ಹಾಗೂ ಆರೋಗ್ಯ ಕೇಂದ್ರದಹಿರಿಯ ಮಹಿಳಾ ಆರೋಗ್ಯ ಸಹಾಯಕಿ ರೂಪಾ ಸಿಕ್ಕಿಬಿದ್ದವರು.

ಕೋವಿಶೀಲ್ಡ್‌ನ 6 ವಯಲ್‌ಗಳನ್ನು ಊಟದ ಬಾಕ್ಸ್‌ನಲ್ಲಿ ಸಾಗಿಸುತ್ತಿದ್ದಾಗ ನಂದಿತಾವರೆ ಬಳಿ ಗ್ರಾಮಸ್ಥರು ತಡೆದಿದ್ದಾರೆ. ಎಲ್ಲಿ ಕೊಂಡುಕೊಂಡು ಹೋಗುತ್ತಿದ್ದೀರಿ’ ಎಂದು ಪ್ರಶ್ನಿಸಿದ್ದಾರೆ.

ಸಮರ್ಪಕ ಉತ್ತರ ನೀಡದೇ ಇದ್ದುದರಿಂದ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ತಾಲ್ಲೂಕು ಆರೋಗ್ಯಾಧಿಕಾರಿಗೆ ದೂರು ನೀಡಿದ್ದಾರೆ.ಲಸಿಕೆಗಳನ್ನು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿ
ದ್ದರು ಎಂಬ ಆರೋಪ ಕೇಳಿಬಂದಿದೆ.

‘ಇಬ್ಬರಿಗೂ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ತನಿಖೆ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ವರದಿ ನೀಡಿದ್ದೇನೆ’ ಎಂದು ಹರಿಹರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಮೋಹನ್ ತಿಳಿಸಿದ್ದಾರೆ.

ಮಾರಾಟ ಮಾಡಲು ಹೋಗುತ್ತಿದ್ದರು ಎಂಬುದರ ಬಗ್ಗೆ ಮಾಹಿತಿ ಇಲ್ಲ. ಟಿಎಚ್‌ಒ ಅವರು ಪ್ರಾಥಮಿಕ ವರದಿ ನೀಡಿದ್ದು, ತಪ್ಪು ಕಂಡುಬಂದರೆ ಕ್ರಮ ಕೈಗೊಳ್ಳುತ್ತೇನೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT