ಮಂಗಳವಾರ, ಸೆಪ್ಟೆಂಬರ್ 28, 2021
24 °C

ದಾವಣಗೆರೆ: 16ರವರೆಗೆ ರಾತ್ರಿ ಕರ್ಫ್ಯೂ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕೋವಿಡ್ ನಿಯಂತ್ರಣ ಮಾಡಲು ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜನಜಂಗುಳಿ ತಪ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9ರಿಂದ ಬೆಳಿಗ್ಗೆ 5ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.

ಜುಲೈ 3 ಹಾಗೂ 18ರಂದು ರಾಜ್ಯ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ಕರ್ಫ್ಯೂ ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ಅನುಮತಿ ನೀಡಿದ ಚಟುವಟಿಕೆಗೆ ಮಾತ್ರ ಅವಕಾಶವಿರುತ್ತದೆ. ಈ ಆದೇಶವು ಆಗಸ್ಟ್‌ 16ರವರೆಗೆ ಅನ್ವಯವಾಗಲಿದೆ.

ದೇವಾಲಯ ಪ್ರವೇಶಕ್ಕೆ ನಿರ್ಬಂಧ: ಕೋವಿಡ್ ಮೂರನೇ ಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಆಗಸ್ಟ್ 31ರವರೆಗೆ  ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದ್ದು, ಶನಿವಾರ ಮತ್ತು ಭಾನುವಾರ ಭಕ್ತರಿಗೆ ದೇಗುಲ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

‘ದೇವಾಲಯಗಳಲ್ಲಿ ಜಾತ್ರೆ, ಮೆರವಣಿಗೆ, ದೇವಾಲಯಗಳಲ್ಲಿ ಉತ್ಸವ, ಸೇವೆ, ಮಡಿ, ಪ್ರಸಾದ, ದಾಸೋಹಗಳನ್ನು ನಿಷೇಧಿಸಿದೆ. ಶನಿವಾರ ಮತ್ತು ಭಾನುವಾರ ಅರ್ಚಕರು ಸಾಂಪ್ರಾದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಆಗಸ್ಟ್ 31ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.