ದಾವಣಗೆರೆ: ಸಹಕಾರ ಸಚಿವರಾಗಿದ್ದ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಕಾಂಗ್ರೆಸ್ ಅಗೌರವ ತೋರಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

‘ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವುದಾಗಿ ಹೇಳುವ ಕಾಂಗ್ರೆಸ್, ಆ ಸಮುದಾಯದ ನಾಯಕರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಾಗಿಲ್ಲ. ಹಿರಿಯರಾಗಿರುವ ರಾಜಣ್ಣ ಅವರಿಂದ ಗೌರವಯುತವಾಗಿ ರಾಜೀನಾಮೆ ಪಡೆಯುವ ಅವಕಾಶವಿತ್ತು. ಏಕಾಏಕಿ ಸಚಿವ ಸಂಪುಟದಿಂದ ಕಿತ್ತುಹಾಕಿ ಮುಜುಗರಕ್ಕೀಡು ಮಾಡಲಾಗಿದೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

‘ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ನಲ್ಲಿ ಆಂತರಿಕ ಪ್ರಜಾಪ್ರಭುತ್ವವೇ ಇಲ್ಲ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಸತ್ಯ ನುಡಿದ ರಾಜಣ್ಣ ಅವರನ್ನು ಬಲಿಪಶು ಮಾಡಲಾಗಿದೆ. ಮತ ಕಳವು ಕುರಿತು ರಾಜಣ್ಣ ನೀಡಿದ ಹೇಳಿಕೆಯಲ್ಲಿ ಏನು ತಪ್ಪಿದೇ’ ಎಂದು ಪ್ರಶ್ನಿಸಿದರು.

ಸ್ಥಳೀಯ ಸಂಸ್ಥೆ ಚುನಾವಣೆಗೂ ಮೈತ್ರಿ

‘ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲ ಚುನಾವಣೆಯಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಕಾಯ್ದುಕೊಳ್ಳಲು ಸಮಿತಿ ರಚಿಸುವ ಪ್ರಸ್ತಾವಕ್ಕೆ ಬಿಜೆಪಿ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ವಿಧಾನಸಭಾ ಚುನಾವಣೆಗೂ ಮುನ್ನವೇ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿವೆ. ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕರ್ತರಿಗೆ ಅಧಿಕಾರ ಸಿಕ್ಕರೆ ವಿಧಾನಸಭಾ ಚುನಾವಣೆ ಸುಲಭವಾಗಲಿದೆ. ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದ್ದು, ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸಲು ರಾಜ್ಯದಲ್ಲಿ ಎರಡು ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ’ ಎಂದರು.

ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ವಿಧಾನಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ವೆಂಕಟರಾವ್ ನಾಡಗೌಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಚಿದಾನಂದಪ್ಪ, ಮುಖಂಡರಾದ ಡಿ. ಯಶೋಧರ್, ಪ್ರತಾಪ್ ಜೋಗಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.