ಬುಧವಾರ, ಸೆಪ್ಟೆಂಬರ್ 23, 2020
24 °C

ಜನ ಸಾಮಾನ್ಯರಿಗೆ ಅನುಕೂಲವಾಗುವ ಯಾವುದೇ ಹೊಸ ಯೋಜನೆ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೇಂದ್ರ ಬಜೆಟ್‌ನಲ್ಲಿ ಜನ ಸಾಮಾನ್ಯರಿಗೆ ಅನುಕೂಲವಾಗುವ ಯಾವುದೇ ಹೊಸ ಯೋಜನೆ ಬಗ್ಗೆ ಪ್ರಸ್ತಾಪಿಸಿಲ್ಲ. ಇದು ನಿರಾಶಾದಾಯಕ ಬಜೆಟ್‌. 2022ರೊಳಗೆ ಗ್ರಾಮೀಣ ಪ್ರದೇಶದ ಎಲ್ಲ ಮನೆಗಳಿಗೆ ವಿದ್ಯುತ್‌ ಸಂಪರ್ಕ, 2024ರೊಳಗೆ ಕುಡಿಯುವ ನೀರಿನ ಪೂರೈಕೆ ಬಗ್ಗೆ ಹೇಳಿದ್ದಾರೆ. ಈಗಿರುವ ನೀರು, ವಿದ್ಯುತ್‌ ಸಮಸ್ಯೆಗಳನ್ನು ಪರಿಹರಿಸಿಕೊಂಡು ಇದು ಸಾಧ್ಯವೇ ಎಂಬ ಪ್ರಶ್ನೆ ಮೂಡುತ್ತದೆ. ರೈತರಿಗಾಗಿ ಶೂನ್ಯ ಬಂಡವಾಳದ ಬಗ್ಗೆ ಪ್ರಸ್ತಾಪಿಸಲಾಗಿದೆ. ಇದು ಹೇಗೆ ಎಂಬುದರ ಬಗ್ಗೆ ವಿವರಣೆ ನೀಡಿಲ್ಲ. ಸ್ವಸಹಾಯ ಗುಂಪುಗಳನ್ನು ಎಲ್ಲ ಕಡೆ ವಿಸ್ತರಿಸುವುದಾಗಿ ಹೇಳಿರುವುದರಲ್ಲಿ ಹೊಸತನವಿಲ್ಲ. ಮಹಿಳೆಯರಿಗೆ ಸಂಶೋಧನಾ ಕ್ಷೇತ್ರದಲ್ಲಿ ಮುಂದುವರಿಯಲು ಉತ್ತೇಜನ ನೀಡುವುದಾಗಿ ಹೇಳಿದ್ದಾರೆ. ಆದರೆ ಯಾವ ರೀತಿ ಎಂಬುದನ್ನು ಪ್ರಸ್ತಾಪಿಸಿಲ್ಲ.

–ಡಾ. ಸುಚಿತ್ರಾ ಎಸ್‌. ಸಹ ಪ್ರಾಧ್ಯಾಪಕರು, ಅರ್ಥಶಾಸ್ತ್ರ ವಿಭಾಗ, ದಾವಣಗೆರೆ ವಿಶ್ವವಿದ್ಯಾಲಯ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.