ದಾವಣಗೆರೆ: ನಾಯಕತ್ವದ ಬದಲಾವಣೆಯ ಚರ್ಚೆಯೇ ಇಲ್ಲ. ಮುಂದಿನ ಎರಡೂವರೆ ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.

ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಸಂಪುಟ ಪುನರ್ರಚನೆ ಬಗ್ಗೆ ಯಾವುದೇ ಗೊಂದಲಗಳು ಇಲ್ಲ. ಮುಖ್ಯಮಂತ್ರಿ, ನಾವು ಕೇಂದ್ರ ನಾಯಕರ ಜತೆಗೆ ಮಾತನಾಡಿದ್ದೇವೆ. ಕೆಲವೇ ದಿನಗಳಲ್ಲಿ ಆಗುತ್ತದೆ. ಕಾದು ನೋಡಿ’ ಎಂದು ತಿಳಿಸಿದರು.

‘ಮುಖ್ಯಮಂತ್ರಿಗಳು ಮತ್ತು ನಾನು 15 ದಿನಕ್ಕೊಮ್ಮೆ ಭೇಟಿಯಾಗುತ್ತೇವೆ. ಅದೇ ರೀತಿ ಸಂತೋಷ್ಜಿ ಅವರು ನಮ್ಮ ಮಾರ್ಗದರ್ಶಕರು. ಅವರ ಮಾರ್ಗದರ್ಶನದಂತೆ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.

‘ನಿಗಮ ಆಗಬೇಕು ಎಂಬ ಬೇಡಿಕೆ ಇತ್ತು. ಅದರಂತೆ ಮಾಡಿದ್ದಾರೆ. ಅನುದಾನವನ್ನು ಬೇಡಿಕೆಯಂತೆ ಮುಖ್ಯಮಂತ್ರಿ ನೀಡಿದ್ದಾರೆ’ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಬಗ್ಗ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಮರಾಠ ಅಭಿವೃದ್ಧಿ ಮಂಡಳಿ ಮಾಡಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ಕೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡಿಯೇ ಮಾಡುತ್ತದೆ’ ಎಂದು ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.