ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕ್ಸಲ್‌ ಬಾಧಿತ 10 ರಾಜ್ಯಗಳಲ್ಲಿ 4 ಸಾವಿರ ಮೊಬೈಲ್‌ ಟವರ್‌

Last Updated 23 ಮೇ 2018, 19:25 IST
ಅಕ್ಷರ ಗಾತ್ರ

ನವದೆಹಲಿ : ನಕ್ಸಲ್‌ ಬಾಧಿತ 10 ರಾಜ್ಯಗಳಲ್ಲಿ ಮೊಬೈಲ್‌ ಸಂಪರ್ಕ ಜಾಲ ಉತ್ತಮಪಡಿಸಲು ಸುಮಾರು 4,072 ಮೊಬೈಲ್‌ ಟವರ್‌ ಅಳವಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಗೃಹ ಇಲಾಖೆಯ ಈ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ₹3,167 ಕೋಟಿ ವೆಚ್ಚದಲ್ಲಿ ಆಂಧ್ರ‍ಪ್ರದೇಶ, ಬಿಹಾರ, ಛತ್ತೀಸಗಡ, ಜಾರ್ಖಂಡ್‌, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಒಟ್ಟು 2,329 ಮೊಬೈಲ್‌ ಟವರ್‌ಗಳನ್ನು ಅಳವಡಿಸಲಾಗಿದೆ.

ಭದ್ರತೆ ಸವಾಲು ಎದುರಿಸುತ್ತಿರುವ ಮತ್ತು ಎಡಪಂಥೀಯ ಉಗ್ರರ ಬೆದರಿಕೆ ಇರುವ ಈ ರಾಜ್ಯಗಳಲ್ಲಿ ಮೊಬೈಲ್‌ ಸಂಪರ್ಕ ಜಾಲ ಅಭಿವೃದ್ಧಿ
ಪಡಿಸಲು ಈಗ ಹೆಚ್ಚುವರಿಯಾಗಿ ಮೊಬೈಲ್‌ ಟವರ್‌ಗಳನ್ನು ಅಳವಡಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದರು.

90 ಜಿಲ್ಲೆಗಳು ನಕ್ಸಲ್‌ ಬಾಧಿತವಾಗಿದ್ದು, ಇದರಲ್ಲಿ 30 ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಸಮಸ್ಯೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT