ದಾವಣಗೆರೆ: ‘ಜಿಲ್ಲೆಯಲ್ಲಿ ಅಡುಗೆ ಅನಿಲದ ದಾಸ್ತಾನು ಹೇರಳವಾಗಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸಾರ್ವಜನಿಕರು ಆತಂಕದಿಂದ ಅತಿಯಾಗಿ ಸಿಲಿಂಡರ್ ಬುಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದರಿಂದಾಗಿ ವ್ಯವಸ್ಥೆಯ ಮೇಲೆ ಒತ್ತಡ ಉಂಟಾಗಲಿದೆ’ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಅಡುಗೆ ಅನಿಲ ಪೂರೈಕೆದಾರರು ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿ ಮಾತನಾಡಿದರು.

‘ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಗೃಹ ಉಪಯೋಗಿ ಅಡುಗೆ ಅನಿಲ ಸಿಲಿಂಡರ್ ಅನ್ನು ಬುಕ್ ಮಾಡಿದ 25 ದಿನದೊಳಗೆ ವಿತರಣೆ ಮಾಡಲಾಗುವುದು’ ಎಂದು ತಿಳಿಸಿದರು.

‘ಮನೆ ಬಳಕೆಯ ಸಿಲಿಂಡರ್ಗಳನ್ನು ಹೋಟೆಲ್, ರೆಸ್ಟೋರೆಂಟ್ ಅಥವಾ ಇತರ ವಾಣಿಜ್ಯ ಉದ್ದೇಶಗಳಿಗೆ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ರಸ್ತೆ ಬದಿಯ ಗಾಡಿಗಳು ಅಥವಾ ವಾಣಿಜ್ಯ ಮಳಿಗೆಗಳಲ್ಲಿ ಗೃಹ ಬಳಕೆಯ ಸಿಲಿಂಡರ್ ಕಂಡುಬಂದರೆ ತಕ್ಷಣವೇ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಚ್ಚರಿಸಿದರು.

ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಊಟದಲ್ಲಿ ತೊಂದರೆಯಾಗದಂತೆ ನಿರಂತರ ಪೂರೈಕೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ವಸತಿ ನಿಲಯಗಳಲ್ಲಿ ಗ್ಯಾಸ್ ಉಳಿತಾಯ ಮಾಡುವ ನಿಟ್ಟಿನಲ್ಲಿ ಚಪಾತಿ, ಪೂರಿ ದೊಸೆಯಂತಹ ಅಡುಗೆಗಳನ್ನು ತಾತ್ಕಾಲಿಕವಾಗಿ ಮುಂದೂಡಿ, ಬದಲಿಗೆ ಉಪ್ಪಿಟ್ಟು, ಪುಲಾವ್, ತರಕಾರಿ ಬಾತ್, ಅನ್ನ, ತರಕಾ ಸಂಬಾರು ಮಾಡುವಂತೆ ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ., ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಆಹಾರ ನಿರೀಕ್ಷಕರು, ಅನಿಲ ಪೂರೈಕೆ ಮಾಡುವ ಎಜೆನ್ಸಿಗಳ ಪ್ರತಿನಿಧಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.