ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗಾಯತ್ರಿ ಸಿದ್ದೇಶ್ವರ ಅವರಿಗೆ ಇನ್ನು ಬೆಂಬಲ ನೀಡಿಲ್ಲ: ಮಾಡಾಳ್ ಮಲ್ಲಿಕಾರ್ಜುನ್

Published 20 ಮಾರ್ಚ್ 2024, 6:14 IST
Last Updated 20 ಮಾರ್ಚ್ 2024, 6:14 IST
ಅಕ್ಷರ ಗಾತ್ರ

ಚನ್ನಗಿರಿ: ‘ನಮ್ಮಲ್ಲಿ ವಿಚಾರ ಭಿನ್ನಾಭಿಪ್ರಾಯಗಳು ಇವೆ. ಹಾಗಾಗಿ ನಾವೆಲ್ಲ ರಾಜ್ಯ ಮುಖಂಡರ ಸಮ್ಮುಖದಲ್ಲಿ ಒಂದೆಡೆ ಕುಳಿತು ಚರ್ಚೆ ಮಾಡಿ, ಸಮಸ್ಯೆಯನ್ನು ನಿವಾರಣೆ ಮಾಡಬೇಕಾಗಿದೆ. ಚರ್ಚೆ ಮಾಡಿದ ನಂತರ ಈ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬೆಂಬಲಿಸಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧಾರ ಮಾಡಲಿದ್ದೇವೆ’ ಎಂದು ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಹೇಳಿದರು.

‘ಶಿವಮೊಗ್ಗದಲ್ಲಿ ಸೋಮವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ಕಾರ್ಯಕರ್ತರು, ಅಭಿಮಾನಿಗಳನ್ನು ಆಹ್ವಾನಿಸಿದೆ. ಅಂದ ಮಾತ್ರಕ್ಕೆ ಗಾಯತ್ರಿ ಸಿದ್ದೇಶ್ವರ ಅವರನ್ನು ಬೆಂಬಸಿಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

‘ಬಿಜೆಪಿಯ ರವೀಂದ್ರನಾಥ್, ರೇಣುಕಾಚಾರ್ಯ, ಶಿವಯೋಗಿ ಸ್ವಾಮಿ, ಗುರುಸಿದ್ದನಗೌಡ, ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್ ಮುಂತಾದವರು ಬಿಜೆಪಿಯ ಮುಖಂಡರಿಂದಲೇ ದೌರ್ಜನ್ಯಕ್ಕೆ ಒಳಗಾಗಿದ್ದೇವೆ. ಆದರೆ, ನಾವೆಲ್ಲಾ ಮೋದಿಜೀ ಅವರ ಪಕ್ಕಾ ಅಭಿಮಾನಿಗಳು. ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬುದು ನಮ್ಮೆಲ್ಲರ ಬಯಕೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT