ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls: ಕಾಂಗ್ರೆಸ್‌ಗೆ ಅಲೆಮಾರಿ ಬುಡಕಟ್ಟು ಮಹಾಸಭಾ ಬೆಂಬಲ

Published 30 ಏಪ್ರಿಲ್ 2024, 14:23 IST
Last Updated 30 ಏಪ್ರಿಲ್ 2024, 14:23 IST
ಅಕ್ಷರ ಗಾತ್ರ

ದಾವಣಗೆರೆ: ಪ್ರಸಕ್ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಅಲೆಮಾರಿ ಬುಡಕಟ್ಟು ಮಹಾಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಬೆಂಬಲ ಸೂಚಿಸಲಿದೆ ಎಂದು ಮಹಾಸಭಾ ಗೌರವಾಧ್ಯಕ್ಷ ಡಿ. ತಿಪ್ಪಣ್ಣ ಹೇಳಿದರು.

ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳು, ತಳ ಸಮುದಾಯದ ಪರವಾಗಿದ್ದು, ಕಾಂಗ್ರೆಸ್ ತಳಸಮುದಾಯದ ಶ್ರೇಯೋಭಿವೃದ್ಧಿಗೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದೆ. ಯುಪಿಎ ಸರ್ಕಾರವು ರಾಷ್ಟ್ರೀಯ ಅಲೆಮಾರಿ ಆಯೋಗವನ್ನು ರಚಿಸಿದೆ. ಕಾಂಗ್ರೆಸ್ ಬೆಂಬಲಿಸಲು ರಾಜ್ಯಮಟ್ಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಳಸಮುದಾಯದ ಅಧ್ಯಯನಕ್ಕೆ ಕೋಶ ರಚನೆ ಮಾಡಿದ್ದಾರೆ. ಅಲ್ಲದೇ ಅವರು ಅಲೆಮಾರಿ ನಿಗಮವನ್ನು ಸ್ಥಾಪಿಸಿ ನಿಗಮದ ಮುಖಾಂತರ ಕರ್ನಾಟಕ ರಾಜ್ಯದ ಎಲ್ಲಾ ಅಲೆಮಾರಿ ಸಮುದಾಯಗಳಿಗೆ ಅಭಿವೃದ್ಧಿಗೆ ಸವಲತ್ತುಗಳನ್ನು ತಲುಪಿಸುತ್ತಿದ್ದಾರೆ. ಸಿ.ಎಸ್.ದ್ವಾರಕನಾಥ್ ಅವರ ಸಲಹೆಯಂತೆ ಮಹಾಸಭಾದ ಸದಸ್ಯರು ಒಮ್ಮತದಿಂದ ಬೆಂಬಲ ಘೋಷಿಸಿದ್ದೇವೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪೇಶಪ್ಪ ಮಾಹಿತಿ ನೀಡಿದರು.

ಪ್ರಧಾನ ಕಾರ್ಯದರ್ಶಿ ಎಸ್.ವಿ.ಮಂಜಪ್ಪ, ಕೋಶಾಧ್ಯಕ್ಷ ಕೆ.ಪಿ.ಸಿದ್ದಪ್ಪ, ಸಂಘಟನಾ ಕಾರ್ಯದರ್ಶಿ ಡಿ.ಕುಮಾರ್, ಸದಸ್ಯ ಪ್ರದೀಪ್ ಜರೀಕಟ್ಟೆ, ಚಿತ್ರಲಿಂಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT