ಬುಧವಾರ, ಆಗಸ್ಟ್ 17, 2022
23 °C

ಟೀಕೆಗೆ ಜಗ್ಗಲ್ಲ, ಕೆಲಸ ಮುಂದುವರಿಸುವೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊನ್ನಾಳಿ: ‘ಯಾರೇ ನನ್ನ ಮೇಲೆ ಟೀಕೆ ಮಾಡಿದರೂ ಅದಕ್ಕೆ ಜಗ್ಗುವುದಿಲ್ಲ. ನನ್ನ ಕೆಲಸ ಮುಂದುವರಿಸಿಕೊಂಡು ಹೋಗುತ್ತೇನೆ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಬುಧವಾರ ಅರಬಗಟ್ಟೆಯಲ್ಲಿರುವ ಕೋವಿಡ್ ಕೇಂದ್ರದಲ್ಲಿ ಕೊರೊನಾದಿಂದ ಗುಣಮುರಾದ 83 ಜನರನ್ನು ಬೀಳ್ಕೊಟ್ಟು ಮಾತನಾಡಿದರು.

‘ಕೊರೊನಾ ಸೋಂಕಿನಿಂದ ಗುಣಮುಖರಾಗಿ ಹೋಗುವವರು ತಮ್ಮ ತಮ್ಮ ಗ್ರಾಮಗಳಿಗೆ ತೆರಳಿದ ಮೇಲೆ ಕೊರೊನಾ ವಾರಿಯರ್‌ಗಳಾಗಿ ಕೆಲಸ ಮಾಡುವ ಮೂಲಕ ಕೊರೊನಾ ಜಾಗೃತಿ ಮೂಡಿಸಬೇಕು. ನಾನು ಸೋಂಕಿತ ಬಂಧುಗಳ ಸಹೋದರನಾಗಿ ಇಲ್ಲಿದ್ದುಕೊಂಡು ಕೆಲಸ ಮಾಡುತ್ತಿದ್ದೇನೆ’ ಎಂದರು.

ತಾಲ್ಲೂಕಿನ ಹೊಳೆಹರಹಳ್ಳಿ ಗ್ರಾಮಸ್ಥರು ಸೋಂಕಿತರಿಗೆ ರೊಟ್ಟಿ ಹಾಗೂ ಗೋಧಿ ಪಾಯಸದ ವ್ಯವಸ್ಥೆ ಮಾಡಿಸಿದ್ದು ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಯಡಿಯೂರಪ್ಪ ಹೋಂ ಪ್ರಾಡಕ್ಟ್ ಅಲ್ಲ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೋಮ್ ಪ್ರಾಡಕ್ಟ್ ಅಲ್ಲ. ನೂರಾರು ಹೋರಾಟಗಳನ್ನು ಮಾಡಿಕೊಂಡು ಬಂದು ಮುಖ್ಯಮಂತ್ರಿ
ಯಾದವರು, ಅಂಥವರ ಬಗ್ಗೆ ನಿನ್ನೆ ಮೊನ್ನೆ ಬಂದವರು ಮಾತನಾಡುವುದು ಸರಿಯಲ್ಲ.  ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ, ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡುವವರ ವಿರುದ್ಧ  ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇನೆ’ ಎಂದರು.

ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಯಲ್ಲಿ ಜಯಗಳಿಸುವ ನಿಟ್ಟಿನಲ್ಲಿ ಪಕ್ಷದ ಸಂಘಟನೆ ಮಾಡಬೇಕಾಗಿದೆ ಎಂದು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು