ಸೋಮವಾರ, ಸೆಪ್ಟೆಂಬರ್ 27, 2021
21 °C

ಮುಖ್ಯಮಂತ್ರಿ ಬದಲಾವಣೆಗೆ ಕಾಲ ಸೂಕ್ತವಲ್ಲ: ಶಾಸಕ ರಾಮಚಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕೊರೊನಾ ಸಂಕಷ್ಟ ಕಾಲದಲ್ಲಿ ಯಡಿಯೂರಪ್ಪ ಅವರನ್ನ ಬದಲಾಯಿಸುವುದು ಸರಿಯಲ್ಲ. ಪಕ್ಷದ ಭವಿಷ್ಯದ ದೃಷ್ಟಿಯಿದ ಯಡಿಯೂರಪ್ಪ ಇರಬೇಕು ಎಂದು ಜಗಳೂರು ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ವಿ. ರಾಮಚಂದ್ರ ತಿಳಿಸಿದ್ದಾರೆ.

‘ಭಾನುವಾರ ಶಾಸಕರ ಸಭೆ ಮುಖ್ಯ ಸಚೇತಕರು ಮಾಹಿತಿ ನೀಡಿದ್ದರು. ನಾನು ಬೆಂಗಳೂರಿಗೆ ಹೋಗುವೆ. ಮುಖ್ಯಮಂತ್ರಿಗಳ ಜತೆಗೇ ಮಾತನಾಡುತ್ತೇನೆ. ಯಡಿಯೂರಪ್ಪ ಅವರು ಚನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ನಾನು ಯಡಿಯೂರಪ್ಪ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದವಾಗಿರುವೆ. ಎಲ್ಲ ಜನರ ಪ್ರೀತಿ ವಿಶ್ವಾಸ ಗಳಿಸಿ ಬಿಎಸ್‌ವೈ ಕೆಲಸ ಮಾಡುತ್ತಿದ್ದಾರೆ’ ಎಂದು ಸುದ್ದಿಗಾರರಿಗೆ ಗುರುವಾರ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು