ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಫಲಿತಾಂಶದ ಬಗ್ಗೆ ಯೋಚಿಸಿಲ್ಲ: ಡಾ.ಪ್ರಭಾ ಮಲ್ಲಿಕಾರ್ಜುನ್

Published 31 ಮೇ 2024, 6:32 IST
Last Updated 31 ಮೇ 2024, 6:32 IST
ಅಕ್ಷರ ಗಾತ್ರ

ದಾವಣಗೆರೆ: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ ಹಾಗೂ ಅಂತರದ ಬಗ್ಗೆ ಯೋಚನೆ ಮಾಡಿಲ್ಲ. ನಮ್ಮ ಕರ್ತವ್ಯ ನಾವು ಮಾಡಿದ್ದು, ಜನರು ಅಧಿಕಾರ ಕೊಟ್ಟರೆ ಕೆಲಸ ಮಾಡುತ್ತೇವೆ’ ಎಂದು ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

‘ಲೋಕಸಭಾ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ಉತ್ತಮವಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯರು, ಶಾಸಕರು, ಬೂತ್ ಮಟ್ಟದ ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟದ ಚುನಾವಣೆ ಮಾಡಿದಂತೆ ಆಗಿದೆ ಎಂದು ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ. ದಾವಣಗೆರೆ ಇತಿಹಾಸದಲ್ಲೇ ಕಾರ್ಯಕರ್ತರು ಈ ರೀತಿ ಕೆಲಸ ಮಾಡಿದ್ದು ಕಡಿಮೆ. ಗ್ಯಾರಂಟಿ ಯೋಜನೆಗಳು, ಶಾಸಕರ ಬಲ ನಮಗೆ ಇದೆ. 20 ವರ್ಷಗಳಿಂದ ಕಾಂಗ್ರೆಸ್‌ನ ಲೋಕಸಭಾ ಸದಸ್ಯರನ್ನು ನೋಡಿಲ್ಲ. ಈ ಬಾರಿ ನೋಡೇ ನೋಡುತ್ತೇವೆ ಎಂದು ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ’ ಎಂದು ಅವರು ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.

ಇದಕ್ಕೂ ಮೊದಲು ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT