ಕಡರನಾಯ್ಕನಹಳ್ಳಿ: ನರೇಗಾ ಕಾರ್ಮಿಕರ ಆರೋಗ್ಯದ ಕಾಳಜಿ ದೃಷ್ಟಿಯಿಂದ ಸರ್ಕಾರವು ಆರೋಗ್ಯ ಉಚಿತ ತಪಾಸಣೆ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಹೇಳಿದರು.

ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಕೂಲಿ ಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರ ಉದ್ದೇಶಿಸಿ ಮಾತನಾಡಿದ ಅವರು, ಯೋಜನೆಯಡಿ ಕೆಲಸ ಮಾಡುವಾಗ ಈಚೆಗೆ ಮೃತಪಟ್ಟ ಕಾರ್ಮಿಕನಿಗೆ ₹2 ಲಕ್ಷ ಪರಿಹಾರ ನೀಡಿರುವುದಾಗಿ ತಿಳಿಸಿದರು.

ನರೇಗಾ ಯೋಜನೆಯು ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಸುವ ಜತೆಗೆ ಭದ್ರತೆ ಕಲ್ಪಿಸಿದೆ. ಯೋಜನೆಯು ಪ್ರತೀ ಕುಟುಂಬಕ್ಕೆ 100 ದಿನಗಳ ಉದ್ಯೋಗದ ಖಾತ್ರಿ ನೀಡುತ್ತದೆ ಎಂದರು. ಕೆಲಸದ ದಿನಗಳನ್ನು 150 ದಿನಗಳಿಗೆ ವಿಸ್ತರಿಸುವಂತೆ ಕಾರ್ಮಿಕರು ಈ ವೇಳೆ ಕೋರಿದರು. ಈ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಿಇಒ ಭರವಸೆ ನೀಡಿದರು.

‘ಯಾವುದೇ ತರಹದ ಕಾಯಿಲೆಗಳನ್ನು ನಿರ್ಲಕ್ಷ್ಯ ಮಾಡಬಾರದು. ಆರೋಗ್ಯ ಶಿಬಿರಗಳ ಬಗ್ಗೆ ಉದಾಸೀನತೆ ಬೇಡ. ಸರ್ಕಾರಿ ಆರೋಗ್ಯ ಸೇವೆಗಳನ್ನು ಬಳಸಿಕೊಳ್ಳಿ. ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುವ ಸಂದರ್ಭವಿದ್ದರೆ, ₹5 ಲಕ್ಷದವರೆಗೆ ಚಿಕಿತ್ಸಾ ಸೌಲಭ್ಯವಿದೆ’ ಎಂದು ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಅಧಿಕಾರಿ ಡಾ.ಮುರುಳಿ ತಿಳಿಸಿದರು.

150ಕ್ಕೂ ಹೆಚ್ಚು ಕಾರ್ಮಿಕರು ತಪಾಸಣೆಗೆ ಒಳಪಟ್ಟರು. ತಾಲ್ಲೂಕು ವೈದ್ಯಾಧಿಕಾರಿ ಅಬ್ದುಲ್ ಖಾದರ್, ನರೇಗಾ ಸಹಾಯಕ ನಿರ್ದೇಶಕ ಜಿ.ಆರ್. ಸುರೇಶ್, ಪಿಡಿಒ ಶಿಲ್ಪಾ ಮಲ್ಲೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾಮಾಕ್ಷಿ ಅಶೋಕ್, ಡಾ.ಕಾರ್ತಿಕ್, ಹಿರಿಯ ಆರೋಗ್ಯ ನಿರೀಕ್ಷಕ ನಾಗರಾಜ್, ಗ್ರಾಮ ಪಂಚಾಯಿತಿ ಸದಸ್ಯ ವಿ. ಕುಬೇರಪ್ಪ, ಚಕ್ಕಡಿ ಚಂದ್ರಪ್ಪ, ಪರಶುರಾಮ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.