ನ್ಯಾಮತಿ: ಕೌಟುಂಬಿಕ ಸಮಸ್ಯೆಯಿಂದ ಮನನೊಂದ ದಂಪತಿ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟು, ಪತ್ನಿ ಗಂಭೀರ ಸ್ಥಿತಿಯಲ್ಲಿದ್ದಾರೆ.

ಪಟ್ಟಣದ ಕಾಳಿಕಾಂಬಾ ರಸ್ತೆಯ ನಿವಾಸಿ ಗಡೆಕಟ್ಟೆರ ಪರಮೇಶ್ವರಪ್ಪ (66) ಆತ್ಮಹತ್ಯೆ ಮಾಡಿಕೊಂಡವರು. ಅವರ ಜೊತೆ ವಿಷ ಸೇವಿಸಿದ್ದ ಪತ್ನಿ ಓಂಕಾರಮ್ಮ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಮೂವರು ಗಂಡು ಮಕ್ಕಳು, ಒಬ್ಬ ಪುತ್ರಿ ಇದ್ದು ಎಲ್ಲರೂ ಮದುವೆಯಾಗಿ ಪ್ರತ್ಯೇಕವಾಗಿ ವಾಸವಿದ್ದಾರೆ.

‘ತಂದೆ– ತಾಯಿಯು ಕೊನೆಯ ಮಗ ಶಿವಕುಮಾರ ಮನೆಯಲ್ಲಿ ವಾಸವಿದ್ದರು. ಪ್ರತ್ಯೇಕವಾಗಿ ಅಡುಗೆ ಮಾಡಿಕೊಂಡು ಊಟ ಮಾಡುತ್ತ ಯಾರೊಂದಿಗೂ ಮಾತನಾಡದೆ ಮಾನಸಿಕವಾಗಿ ನೊಂದಿದ್ದರು. ತಂದೆಯ ಸಾವಿಗೆ ಮಾನಸಿಕ ಖಿನ್ನತೆ ಕಾರಣ’ ಎಂದು ಅವರ ಪುತ್ರ ನ್ಯಾಮತಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನ್ಯಾಮತಿ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್.ರವಿ ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.