ನ್ಯಾಮತಿ: ‘ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ಪಟ್ಟಣದ ಪ್ರಗತಿಗೆ ತಾಲ್ಲೂಕು ರಚನೆಯ ನಂತರ ಹೆಚ್ಚಿನ ಅನುದಾನ ತರಲಾಗಿದೆ’ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸಾರ್ವಜನಿಕರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನ ಜನತೆಯ ಬಹು ಮುಖ್ಯ ಬೇಡಿಕೆ ಆಗಿದ್ದ ಪ್ರಜಾಸೌಧ (ತಾಲ್ಲೂಕು ಆಡಳಿತ ಕೇಂದ್ರ) ಕಟ್ಟಡ ನಿರ್ಮಾಣ ಹಾಗೂ ವಿವಿಧ ಕಟ್ಟಡಗಳ ಕಾಮಗಾರಿ ಒಳಗೊಂಡಂತೆ ಒಟ್ಟು ₹ 235 ಕೋಟಿ ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಆ ಕಾಮಗಾರಿಗಳಿಗೆ ಮೇ 19ರಂದು ಬೆಳಿಗ್ಗೆ 11 ಗಂಟೆಗೆ ಸಚಿವರು, ಸಂಸದರು, ಗಣ್ಯರು ಭೂಮಿಪೂಜೆ ನೆರವೇರಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.

‘ಎಸ್.ಬಿ.ಐ ಬ್ಯಾಂಕಿನ ಕಳವು ಪ್ರಕರಣದಲ್ಲಿ ಪತ್ತೆಯಾದ ಒಡವೆಗಳನ್ನು ಹಿಂತಿರುಗಿಸಲು ಬ್ಯಾಂಕ್ನವರು ಬಾಂಡ್ ಪೇಪರ್ನಲ್ಲಿ ಸಹಿ ಮಾಡಿಸಿಕೊಳ್ಳುತ್ತಿದ್ದಾರೆ’ ಎಂದು ಗ್ರಾಹಕರು ದೂರಿದರು.

‘ಸಾರ್ವಜನಿಕರ ಎಲ್ಲಾ ಬೇಡಿಕೆಗಳನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು’ ಎಂದು ಭರವಸೆ ನೀಡಿದರು.

ತಹಶೀಲ್ದಾರ್ ಎಂ.ಪಿ.ಕವಿರಾಜ, ಹೊನ್ನಾಳಿ ಡಿಪೊ ವ್ಯವಸ್ಥಾಪಕ ರಾಮಚಂದ್ರಪ್ಪ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.

ಸ್ಥಳೀಯ ಕಾಂಗ್ರೆಸ್ ಮುಖಂಡರು, ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-43-1405063645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.