ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

Published : 24 ಸೆಪ್ಟೆಂಬರ್ 2024, 15:34 IST
Last Updated : 24 ಸೆಪ್ಟೆಂಬರ್ 2024, 15:34 IST
ಫಾಲೋ ಮಾಡಿ
Comments

ನ್ಯಾಮತಿ: ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ತೀರ್ಮಾನದಂತೆ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ. 26ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಗ್ರಾಮ ಆಡಳಿತಾಧಿಕಾರಿಗಳ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ರಾಘವೇಂದ್ರ ತಿಳಿಸಿದರು.

ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಬಗ್ಗೆ ತಹಶೀಲ್ದಾರ್‌ಗೆ ಸೋಮವಾರ ಮನವಿ ಸಲ್ಲಿಸಿ ಅವರು ಮಾತನಾಡಿದರು.

‘ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ’ ಎಂದರು.

‘ಆಧುನಿಕ ತಂತ್ರಾಂಶಕ್ಕೆ ಸಂಬಂಧಿಸಿದಂತೆ ಅವಶ್ಯ ಸೌಲಭ್ಯವನ್ನು ಕಲ್ಪಿಸುವವರೆಗೆ ಸೆ. 22ರಿಂದ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್‌ಹುಕುಂ, ಹಕ್ಕುಪತ್ರ, ನಮೂನೆ 1–5 ವೆಬ್ ಅಪ್ಲಿಕೇಷನ್ ಮತ್ತು ಪೌತಿ ಆಂದೋಲನ ಆ್ಯಪ್ ತಂತ್ರಾಂಶಗಳ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಪದೋನ್ನತಿ, ವರ್ಗಾವಣೆ, ನೌಕರರ ಅಮಾನತ್ತು ಸೇರಿ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಅವುಗಳಗೆ ಸರ್ಕಾರ ಸ್ಪಂದಸದೇ ಇದ್ದಲ್ಲಿ ಸೆ. 26ರಿಂದ ಎಲ್ಲ ಬಗೆಯ ಮೊಬೈಲ್ ಆ್ಯಪ್ ಹಾಗೂ ನೆಟ್ ಅಪ್ಲಿಕೇಶನ್ ಸ್ಥಗಿತಗೊಳಿಸಿ ರಾಜ್ಯವ್ಯಾಪಿ ಮುಷ್ಕರ ನಡೆಸಲಾಗುವುದು’ ಎಂದರು.

ಸಂಘದ ಉಪಾಧ್ಯಕ್ಷ ಎಸ್.ಪಿ.ವಿಜಯಕುಮಾರ ಹಾಗೂ ತಾಲ್ಲೂಕಿನ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT