ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಮತಿ | ಸಾಲದ ಹೊರೆ: ರೈತ ಆತ್ಮಹತ್ಯೆ

Published 18 ಏಪ್ರಿಲ್ 2024, 6:32 IST
Last Updated 18 ಏಪ್ರಿಲ್ 2024, 6:32 IST
ಅಕ್ಷರ ಗಾತ್ರ

ಮಾದನಬಾವಿ: ಸಾಲದ ಹೊರೆಯಿಂದ ಗ್ರಾಮದ ರೈತರೊಬ್ಬರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಂ.ಆರ್. ಶಿವರಾಜ (35) ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ 1 ಎಕರೆ 20 ಗುಂಟೆ ಜಮೀನು ಹೊಂದದ್ದು, ಕೃಷಿ ಚಟುವಟಿಕೆಗಳಿಗಾಗಿ ಹಲವು ಸ್ವಸಹಾಯ ಸಂಘ ಹಾಗೂ ಬ್ಯಾಂಕ್‌ಗಳಲ್ಲಿ ಒಟ್ಟು ₹ 6 ಲಕ್ಷ ಸಾಲ ಮಾಡಿದ್ದರು. ಎರಡು ವರ್ಷಗಳಿಂದ ಸರಿಯಾಗಿ ಮಳೆಯಾಗದ ಕಾರಣ ಬೆಳೆ ಕೈಗೆ ಬಂದಿರಲಿಲ್ಲ. ಸಾಲ ತೀರಿಸುವ ಬಗ್ಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಎನ್.ಎಸ್. ರವಿ, ಸಬ್‌ ಇನ್‌ಸ್ಪೆಕ್ಟರ್ ಎಸ್.ಪಿ. ಪ್ರವೀಣ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT