ಒಡೆಯರಹತ್ತೂರು (ನ್ಯಾಮತಿ): ‘ಸರ್ಕಾರ ಮಾಡದ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳುತ್ತಿರುವುದು ಹೆಮ್ಮೆಯ ವಿಷಯ’ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ತಾಲ್ಲೂಕಿನ ಒಡೆಯರಹತ್ತೂರು ಗ್ರಾಮದ ಅಯ್ಯನಕೆರೆಯನ್ನು (925ನೇ ಕೆರೆ) ಪುನಃಶ್ಚೇತನಗೊಳಿಸಿ ಹಸ್ತಾಂತರ ಮಾಡುವ ಕಾರ್ಯಕ್ರಮದಲ್ಲಿ ಈಚೆಗೆ ಮಾತನಾಡಿದರು.

‘ಅಂದಾಜು ₹ 1.50 ಕೋಟಿ ವೆಚ್ಚದಲ್ಲಿ ಕೆರೆಯನ್ನು ಅಭಿವೃದ್ಧಿಪಡಿಸಿದ್ದು, ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆಯಬೇಕು’ ಎಂದು ಮನವಿ ಮಾಡಿದರು.

ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಜಿ.ಫಾಲಾಕ್ಷಪ್ಪ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ಜಿಲ್ಲಾ ನಿರ್ದೇಶಕ ಎಂ.ಲಕ್ಷ್ಮಣ, ತಾಲ್ಲೂಕು ಘಟಕದ ಯೋಜನಾಧಿಕಾರಿ ಶಾಂತರಾಮನಾಯಕ, ಯೋಜನೆಯ ಕೃಷಿ ಅಧಿಕಾರಿ ಪ್ರೇಮಕುಮಾರ, ರೈತ ಮುಖಂಡರಾದ ತೇಜಸ್ವಿ ಪಾಟೀಲ್, ಕರಿಬಸಪ್ಪಗೌಡ, ಪಿಡಿಒ ರಶ್ಮಿ, ಜನಜಾಗೃತಿ ಸದಸ್ಯರಾದ ಸುರೇಶ ಹೊಸಕೆರೆ, ರುದ್ರೇಶ ಹಾಗೂ ಸ್ಥಳೀಯ ಮುಖಂಡರು ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-43-251714579

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.