ಮಂಗಳವಾರ, ಜುಲೈ 5, 2022
25 °C

ಸಂತೇಬೆನ್ನೂರು: ಅಧಿಕಾರಿಗಳ ಬೈಕ್ ರ‍್ಯಾಲಿ, ಜಾಗೃತಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಂತೇಬೆನ್ನೂರು: ಬುಲೆಟ್ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ, ಜೀನ್ಸ್ ಟೀಶರ್ಟ್ ಧರಿಸಿ ಪ್ರವಾಸಿಗರಂತೆ ಬಂದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ನೇತೃತ್ವದ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಭಾನುವಾರ ಇಲ್ಲಿನ ಪುಷ್ಕರಣಿ ಭೇಟಿ ನೀಡಿತು.

ಬೈಕ್ ರ‍್ಯಾಲಿ ಮೂಲಕ ಜಾಗೃತಿ ಜಾತಾ ನಡೆಸಿದ ಅಧಿಕಾರಿಗಳ ತಂಡ ಎಲ್ಲಾ ಇಲಾಖೆಗಳ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಿತು. ಹೆಲ್ಮೆಟ್ ಧರಿಸುವುದು, ಕೊರೊನಾ ಲಸಿಕೆ ಹಾಕಿಸುಕೊಳ್ಳುವುದು, ಮಾಸ್ಕ್ ಧರಿಸುವುದು, ಅಪರಾಧ ತಡೆ ಕಾರ್ಯಕ್ರಮ, ಬಾಲ್ಯವಿವಾಹ, ಮಹಿಳಾ ದೌರ್ಜನ್ಯ, ಮಕ್ಕಳ ಮಾರಾಟ ತಡೆ ಬಗ್ಗೆ ಜಾಗೃತಿ ಮೂಡಿಸುವುದು. ಜಿಲ್ಲಾ ಪಂಚಾಯಿತಿಯ ಕಾರ್ಯಕ್ರಮಗಳ ತಿಳಿಸುವ ಉದ್ದೇಶದಿಂದ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಎಸ್‌ಪಿ ಸಿ.ಬಿ. ರಿಷ್ಯಂತ್ ಮಾತನಾಡಿ, ‘ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಐಎಸ್‌ಐ ಮಾರ್ಕ್ ಹೆಲ್ಮೆಟ್ ಮಾತ್ರ ಬಳಸಬೇಕು. ಸರಿಯಾದ ಕ್ರಮದಲ್ಲಿ ಧರಿಸಬೇಕು. ಹೆಲ್ಮೆಟ್ ಸರಿಯಾಗಿ ಧರಿಸದ ಕಾರಣ ಈಚೆಗೆ ದಾವಣಗೆರೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಬೈಕ್ ಅಪಘಾತದಲ್ಲಿ ಮೃತಪಟ್ಟರು. ಹೆಲ್ಮೆಟ್ ಮಾರಾಟ ಮಳಿಗೆಗೆ ಭೇಟಿ ನೀಡಿ ಕಳಪೆ ಹೆಲ್ಮೆಟ್ ಮಾರಾಟ ಮಾಡದಂತೆ ತಿಳಿಸಿದ್ದೇವೆ’ ಎಂದು ಹೇಳಿದರು.

ಪುಷ್ಕರಣಿ ಇತಿಹಾಸದ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದರು. ಪುಷ್ಕರಣಿ ನಿರ್ಮಾಣ ಕೌಶಲವನ್ನು ಶ್ಲಾಘಿಸಿದರು. ಬಳಿಕ ಸೂಳೆಕೆರೆಗೆ ಪ್ರಯಾಣ ಬೆಳೆಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು