ಶುಕ್ರವಾರ, ಡಿಸೆಂಬರ್ 13, 2019
26 °C

19ರಂದು ಮಾಯಕೊಂಡಕ್ಕೆ ನಿಜಗುಣಾನಂದ ಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಯಕೊಂಡ: ಇಲ್ಲಿನ ಆಂಜನೇಯ ವೃತ್ತದಲ್ಲಿ ನ.19 ರಂದು ನಡೆಯಲಿರುವ ಕನ್ನಡ ಯುವಶಕ್ತಿ ಕೇಂದ್ರದ ಬೆಳ್ಳಿಹಬ್ಬ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆ ಬೈಲೂರಿನ ನಿಜಗುಣಾನಂದ ಸ್ವಾಮೀಜಿ ಭಾಗವಹಿಸಲಿದ್ದಾರೆ.

ಕನ್ನಡ ಯುವಶಕ್ತಿ ಕೇಂದ್ರ 25 ವರ್ಷಗಳಿಂದ ಕನ್ನಡ ಪರ ಕಾಳಜಿಯ ಕೆಲಸ ಮಾಡುತ್ತಾ ಬಂದಿದೆ. ಸಂಘ ಸ್ಥಾಪಿಸಿ 25 ವರ್ಷ ತುಂಬಿದ ಸವಿನೆನಪಾಗಿ ಬೆಳ್ಳಿಹಬ್ಬದ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ. ನಿಜಗುಣಾನಂದ ಸ್ವಾಮೀಜಿ ಅವರಿಂದ ವಿಶೇಷ ಪ್ರವಚನ ಏರ್ಪಡಿಸಲಾಗಿದೆ ಎಂದು ಕನ್ನಡ ಯುವಶಕ್ತಿ ಕೇಂದ್ರದ ಅಧ್ಯಕ್ಷ ಟಿ.ಪಿ.ರೇವಣಸಿದ್ದಪ್ಪ, ಗೌರವಾಧ್ಯಕ್ಷ ಆರ್. ನಾಗರಾಜಪ್ಪ, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಲಕ್ಷ್ಮಣ್ ಮಾಹಿತಿ ನೀಡಿದರು.

ಅಂದು ಬೆಳಿಗ್ಗೆ ಕಲಾತಂಡಗಳೊಂದಿಗೆ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಬಿ. ಜೋಗತಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮಂಜುನಾಥ್ ಕುರ್ಕಿ, ತಾಲ್ಲೂಕು ಘಟಕದ ಅಧ್ಯಕ್ಷ ವಾಮದೇವಪ್ಪ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಾಂತ ಗಂಗಾಧರ್ ಪಾಲ್ಗೊಳ್ಳಲಿದ್ದಾರೆ. ಸಂಜೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)